ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಫೆಬ್ರವರಿ 1 ರಂದು ಮಂಡಿಸಲಿರುವ 2022-23 ರ ಬಜೆಟ್‌ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು ಸುಮಾರು 18 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆಯಿದೆ.
ಕೃಷಿ ಸಾಲದ ಹರಿವು ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚುತ್ತಿದೆ, ಪ್ರತಿ ಹಣಕಾಸು ವರ್ಷಕ್ಕೆ ನಿಗಪಡಿಸಿದ ಗುರಿಯನ್ನು ಮೀರಿದೆ. ಸಾಮಾನ್ಯವಾಗಿ ಕೃಷಿ ಸಾಲಗಳು ಒಂಬತ್ತು ಪ್ರತಿಶತದಷ್ಟು ಬಡ್ಡಿದರವನ್ನು ಆಕರ್ಷಿಸುತ್ತದೆ. ಆದುದರಿಂದ ಅಲ್ಪಾವಧಿಯ ಬೆಳೆ ಸಾಲವನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಸರ್ಕಾರವು ಬಡ್ಡಿ ರಿಯಾಯಿತಿನ್ನು ಒದಗಿಸುತ್ತಿದೆ ಎಂದು ತಿಳಿದುಬಂದಿದೆ.
ನಿಗದಿತ ದಿನಾಂಕದೊಳಗೆ ಸಾಲವನ್ನು ತ್ವರಿತವಾಗಿ ಮರುಪಾವತಿಸಲು ರೈತರಿಗೆ ಶೇಕಡಾ ಮೂರರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಔಪಚಾರಿಕ ಸಾಲ ವ್ಯವಸ್ಥೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ವ್ಯಾಪ್ತಿಯನ್ನು ಹೆಚ್ಚಿಸಲು ಆರ್.ಬಿ.ಐ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1 ಲಕ್ಷದಿಂದ 1.6 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…