Advertisement
ಸುದ್ದಿಗಳು

ಎ.3 : ಹೊಸಪೀಳಿಗೆಯ ಕಾಪರ್‌ ಸಲ್ಪೇಟ್‌ ಹಾಗೂ ಸುಧಾರಿತ ಪೈಬರ್‌ ದೋಟಿಯ ಬಗ್ಗೆ ಮಾಹಿತಿ

Share
ಅಡಿಕೆ ಕೊಳೆರೋಗಕ್ಕೆ ಬೋರ್ಡೋದಲ್ಲಿ  ಹೊಸಪೀಳಿಗೆಯ ಕಾಪರ್‌ ಸಲ್ಪೇಟ್‌ ಬಗ್ಗೆ ಮಾಹಿತಿ ಹಾಗೂ ಅಡಿಕೆ ಕೊಯಿಲು ಹಾಗೂ ಬೋರ್ಡೋ ಸಿಂಪಡಣೆಗೆ ಸುಧಾರಿತ ಫೈಬರ್‌ ದೋಟಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ಎ.3 ರಂದು ಪುತ್ತೂರಿನ ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ  ನಡೆಯಲಿದೆ.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ  ಯುಪಿಎಲ್‌ ಲಿಮಿಟೆಡ್‌ ಮುಂಬಯಿ ಇವರ ಸಹಕಾರದಲ್ಲಿ ಎ.3 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹೊಸ ಪೀಳಿಗೆಯ ಕಾಪರ್‌ ಸಲ್ಫೇಟ್‌ ಬಗ್ಗೆ ಮಾಹಿತಿ ಹಾಗೂ ತಂತ್ರಜ್ಞಾನದ ಪರಿಚಯ ನಡೆಯಲಿದೆ. ಅದರ ಜೊತೆಗೆ ಸುಮಾರು 8 ತಿಂಗಳು ಮಣ್ಣಿನಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ  ಜೋಳದ ತ್ಯಾಜ್ಯದಿಂದ ತಯಾರಿಸಿದ ಉತ್ಪನ್ನದ ಪರಿಚಯವೂ ನಡೆಯಲಿದೆ. ಇದೇ ವೇಳೆ ಅಡಿಕೆ ಮರ ಏರದೆ ಔಷಧಿ ಸಿಂಪಡನೆ ಹಾಗೂ ಅಡಿಕೆ ಕೊಯಿಲಿಗೆ ಅಗತ್ಯವಾದ ಸುಧಾರಿತ ಫೈಬರ್‌ ದೋಟಿಯ ಬಗ್ಗೆ ಮಾಹಿತಿಯನ್ನು ಎಂಜಿನಿಯರ್‌ ಆಗಿರುವ ಬಾಲಸುಬ್ರಹ್ಮಣ್ಯ ಅವರು ನೀಡಲಿದ್ದಾರೆ.  ಆಸಕ್ತ 100 ಕೃಷಿಕರಿಗೆ ಮಾತ್ರಾ  ಭಾಗವಹಿಸಲು ಅವಕಾಶ ಇರುತ್ತದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

20 minutes ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

6 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

17 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

21 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

22 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

1 day ago