ಅತಿವೃಷ್ಟಿಯಿಂದ 5 ಲಕ್ಷ ಹೆಕ್ಟೇರ್ ಗೂ ಅಧಿಕ ಪ್ರದೇಶದಲ್ಲಿ ಕೃಷಿಹಾನಿ | ಪರಿಹಾರದ ನಿರೀಕ್ಷೆ | ಪ್ರಧಾನಿಗಳಿಂದಲೂ ಮಾಹಿತಿ ಸಂಗ್ರಹ |

November 23, 2021
10:22 PM

ರಾಜ್ಯದಲ್ಲಿ ಅತಿವೃಷ್ಟಿಯಿಂದ ಸುಮಾರು 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಹಾಗೂ 30,114 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ನಷ್ಟವಾಗಿದೆ.  ಹೀಗಾಗಿ ಬೆಳೆ ನಷ್ಟವಾದ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪರಿಶೀಲನೆ ನಡೆಸಿ ಪ್ರತಿಕ್ರಿಯೆ ನೀಡಿದ್ದರು. ಬೆಳೆ ನಷ್ಟ ಸಂಬಂಧ ಈಗಾಗಲೇ ಜಿಪಿಎಸ್ ಆಧಾರಿತ ಸರ್ವೇ ಮಾಡಿ ವಿವರಗಳನ್ನು ಪರಿಹಾರದ ಆ್ಯಪ್ ಗೆ ಅಪ್ ಲೋಡ್  ಮಾಡಲು ಸೂಚನೆ ನೀಡಲಾಗಿದೆ. ವಿವರಗಳು ಲಭ್ಯವಾದ ಬಳಿಕ ಕೂಡಲೇ ರೈತರ ಖಾತೆಗೆ ಪರಿಹಾರ ಹಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ  ಎಂದು ಹೇಳಿದರು.

ರಾಜ್ಯದಲ್ಲಿ ರಾಗಿ ಬೆಳೆ, ತೋಟಗಾರಿಕೆ ಬೆಳೆ, ತರಕಾರಿ, ಹೂವಿನ ತೋಟ ನಷ್ಟವಾಗಿರುವುದು ಗಮನಕ್ಕೆ ಬಂದಿದೆ.  ಪ್ರಾಥಮಿಕ ವರದಿಯ ಪ್ರಕಾರ ಕೋಲಾರದಲ್ಲಿಯೇ 48,333 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಹಾಗೂ 6,966 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ತಿಳಿಸಿದರು.

ಮಂಗಳವಾರ ಮುಂಜಾನೆ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ಹಲವು ದಿನಗಳಿಂದ ಎಡೆಬಿಡದೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿಗಳು ಮಾಹಿತಿ ಪಡೆದರು. ರಾಜ್ಯಕ್ಕೆ ಅಗತ್ಯ ನೆರವು ಮತ್ತು ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಅತಿವೃಷ್ಟಿ ಕಾರಣದಿಂದ ಬೆಳೆ ನಷ್ಟವಾಗಿದ್ದು ಟೊಮೆಟೋ ಸಹಿತ ತರಕಾರಿ ಬೆಲೆ ಏರಿಕೆಯಾಗಿದೆ. ಟೊಮೆಟೋ ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಇನ್ನಿತರ ತರಕಾರಿ ಮಾರಾಟ ಕೂಡ ಮಾರುಕಟ್ಟೆಗೆ ಬರುವುದು ಕಡಿಮೆಯಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror