ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಲಗಳಲ್ಲಿ ಬಿತ್ತಿದ ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರೆ ಬೆಳೆಗಳಿಗೆ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮೀಲಿ ಲೀಟರ್ ನ್ಯಾನೋ ಯೂರಿಯಾ ಬಳಸಬೇಕೆಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ. ಹೆಚ್. ಹೇಳಿದ್ದಾರೆ. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇಕಡ 50 ರಷ್ಟು ಮಾತ್ರ ದೊರೆಯುವ ಸಾಧ್ಯತೆಯಿದೆ. ಚಿಕ್ಕ ಗಾತ್ರದ ಕಣಗಳನ್ನು ಹೊಂದಿರುವ ನ್ಯಾನೋ ಯೂರಿಯಾ ಬಳಸುವುದರಿಂದ ಬೆಳೆಗಳಿಂದ ಶೇಕಡ 80 ರಷ್ಟು ಪೋಷಕಾಂಶಗಳು ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel