ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗ ಸೇರಿದಂತೆ ಎಲ್ಲ ವರ್ಗಗಳ ಜನರ ಕಲ್ಯಾಣಕ್ಕಾಗಿ ಅನುದಾನ ನೀಡಲಾಗಿದೆ. ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಜಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ ಕೃಷಿ, MSME, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ಅನುದಾನ ಮೀಸಲಿಟ್ಟಿದ್ದು, ಈ ಸೌಲಭ್ಯ ಎಲ್ಲ ರಾಜ್ಯಗಳಿಗೂ ದೊರೆಯಲಿದೆ. ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಕರ್ನಾಟಕವೂ ಸೇರಿದಂತೆ ದೇಶದ 7 ಕೋಟಿ 70 ಸಾವಿರ ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ ಸಿಗಲಿದೆ. ಸಾಲದ ಮಿತಿ ಪ್ರಮಾಣವನ್ನು 3 ಲಕ್ಷ ರೂಪಾಯಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel