ಮುಂಗಾರು ಕೊರತೆ | ರಾಜ್ಯದಲ್ಲಿ ಈ ಬಾರಿ ಆಹಾರ ಉತ್ಪಾದನೆಯಲ್ಲಿ 50%ರಷ್ಟು ನಷ್ಟ |

October 13, 2023
11:48 PM
ರಾಜ್ಯದಲ್ಲಿ ಒಟ್ಟು 118 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 89% ಬಿತ್ತನೆಯಾಗಿದೆ ಎಂದು ವರದಿ ಮಾಡಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 39.74 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ಹಾಗೂ 1.82 ಲಕ್ಷ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಸೇರಿದಂತೆ ಒಟ್ಟು 41.52 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ.

ಮುಂಗಾರು ಮಳೆ ಕೊರತೆ ಮತ್ತು ಅನಿಯಮಿತ ಮಳೆಯ ಕಾರಣದಿಂದ  ಮತ್ತು ಬೆಳೆ ಹಾನಿಯಿಂದಾಗಿ ಕರ್ನಾಟಕದಲ್ಲಿ ಆಹಾರ ಉತ್ಪಾದನೆಯು ಯೋಜಿತ 111 ಲಕ್ಷ ಟನ್‌ಗಳಿಂದ 58 ಲಕ್ಷ ಟನ್‌ಗಳಿಗೆ ಇಳಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.

Advertisement
Advertisement
Advertisement

ಈ ಬಾರಿ 11.84 ಲಕ್ಷ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, 7.16 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.45 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.04 ಲಕ್ಷ ಹೆಕ್ಟೇರ್‌ನಲ್ಲಿ ಹತ್ತಿ, ಶೇಂಗಾ ಮತ್ತು ಕಬ್ಬು 2.7 ಲಕ್ಷ ಹೆಕ್ಟೇರ್, ಸೋಯಾಬೀನ್ 2.2 ಲಕ್ಷ ಹೆಕ್ಟೇರ್‌ ಪ್ರದೇಶಗಳಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಇಲಾಖೆ ಅಂಕಿ ಅಂಶಗಳ ಪ್ರಕಾರ ಒಟ್ಟು 39.74 ಲಕ್ಷ ಹೆಕ್ಟೇರ್ ನಷ್ಟವಾಗಿದೆ.

Advertisement

ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದ್ದು , ಈ ಮಳೆಗಾಲದ ಅವಧಿಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿಯು ಆಹಾರ ಉತ್ಪಾದನೆಯಲ್ಲಿ 50% ನಷ್ಟು ಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಹಿಂಗಾರು ಮಳೆಯಲ್ಲಿ ಆಹಾರ ಉತ್ಪಾದನೆಯನ್ನು ಸಮತೋಲನದಲ್ಲಿಡಲು ಪ್ರಯತ್ನಿಸಲಾಗುವುದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಗುರುವಾರ  ಸುದ್ದಿಗಾರರಿಗೆ ತಿಳಿಸಿದರು. ಜುಲೈನಲ್ಲಿ ವಾಡಿಕೆಗಿಂತ ಶೇ.29ರಷ್ಟು ಅಧಿಕ ಮಳೆಯಾಗಿದ್ದರೆ, ಆಗಸ್ಟ್‌ನಲ್ಲಿ ಶೇ.73ರಷ್ಟು ಕೊರತೆಯಾಗಿ ಬೆಳೆ ಹಾನಿಯಾಗಿದೆ ಎಂದು ಸಚಿವರು ಹೇಳಿದರು. ಬಿತ್ತನೆ ಮಾಡಲು ಸಾಧ್ಯವಾಗದ 60,381 ರೈತರಿಗೆ ₹48 ಕೋಟಿ ಪರಿಹಾರ ನೀಡಲಾಗುತ್ತಿದೆ . ಇದೇ ವೇಳೆ ರಾಜ್ಯದಲ್ಲಿ ಕೃಷಿ ಇಲಾಖೆ ವಿಜಿಲೆನ್ಸ್ ಸೆಲ್ ₹5 ಕೋಟಿಗೂ ಹೆಚ್ಚು ಮೌಲ್ಯದ ಕಳಪೆ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರ ಹಾಗೂ ಕೀಟನಾಶಕಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ 148 ಪ್ರಕರಣಗಳನ್ನು ದಾಖಲಿಸಿದೆ ಎಂದು ಸಚಿವರು ಹೇಳಿದ್ದಾರೆ.

ಕೃಷಿ ಇಲಾಖೆ ನೀಡಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 118 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 89% ಬಿತ್ತನೆಯಾಗಿದೆ ಎಂದು ವರದಿ ಮಾಡಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 39.74 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ಹಾಗೂ 1.82 ಲಕ್ಷ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಸೇರಿದಂತೆ ಒಟ್ಟು 41.52 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಒಟ್ಟು ನಷ್ಟವು ಕ್ರಮವಾಗಿ ₹ 3,824 ಕೋಟಿ ಮತ್ತು ₹ 206 ಕೋಟಿ ಎಂದು ಅಂದಾಜಿಸಲಾಗಿದೆ ಕೃಷಿ ಸಚಿವ ಚೆಲುವನಾರಾಯಣ ಸ್ವಾಮಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡಿ.19 ರಬ್ಬರ್ ಬೆಳೆಗಾರರ ಸಮಾವೇಶ | ರಬ್ಬರ್ ಕೃಷಿಗೆ ಆರ್ಥಿಕ ನೆರವು |
December 17, 2024
9:29 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17.12.2024 | ರಾಜ್ಯದಲ್ಲಿ ದೂರವಾದ ಮಳೆಯ ಆತಂಕ
December 17, 2024
11:59 AM
by: ಸಾಯಿಶೇಖರ್ ಕರಿಕಳ
ಸ್ವಂತ ಉದ್ದಿಮೆ ನಡೆಸುತ್ತಿರುವ ಪದವೀಧರ ಮಹಿಳೆ | ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ ಪಾಸಿಟಿವ್‌ ರಿಸಲ್ಟ್‌ |
December 17, 2024
7:04 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ವಿವೇಕಾನಂದ ಜ್ಯೂನಿಯರ್ ಚೆಸ್ ಪಂದ್ಯಾಟ | ವಿವೇಕಾನಂದ-ಕುಮಾರಸ್ವಾಮಿ-ಎಸ್‌ಡಿಎಂ ಶಾಲೆಗೆ ಬಹುಮಾನ |
December 17, 2024
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror