ಮುಂಗಾರು ಮಳೆ ಕೊರತೆ ಮತ್ತು ಅನಿಯಮಿತ ಮಳೆಯ ಕಾರಣದಿಂದ ಮತ್ತು ಬೆಳೆ ಹಾನಿಯಿಂದಾಗಿ ಕರ್ನಾಟಕದಲ್ಲಿ ಆಹಾರ ಉತ್ಪಾದನೆಯು ಯೋಜಿತ 111 ಲಕ್ಷ ಟನ್‌ಗಳಿಂದ 58 ಲಕ್ಷ ಟನ್‌ಗಳಿಗೆ ಇಳಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಈ ಬಾರಿ 11.84 ಲಕ್ಷ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, 7.16 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.45 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.04 ಲಕ್ಷ ಹೆಕ್ಟೇರ್‌ನಲ್ಲಿ ಹತ್ತಿ, ಶೇಂಗಾ ಮತ್ತು ಕಬ್ಬು 2.7 ಲಕ್ಷ ಹೆಕ್ಟೇರ್, ಸೋಯಾಬೀನ್ 2.2 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಇಲಾಖೆ ಅಂಕಿ ಅಂಶಗಳ ಪ್ರಕಾರ ಒಟ್ಟು 39.74 ಲಕ್ಷ ಹೆಕ್ಟೇರ್ ನಷ್ಟವಾಗಿದೆ.
ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದ್ದು , ಈ ಮಳೆಗಾಲದ ಅವಧಿಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿಯು ಆಹಾರ ಉತ್ಪಾದನೆಯಲ್ಲಿ 50% ನಷ್ಟು ಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಹಿಂಗಾರು ಮಳೆಯಲ್ಲಿ ಆಹಾರ ಉತ್ಪಾದನೆಯನ್ನು ಸಮತೋಲನದಲ್ಲಿಡಲು ಪ್ರಯತ್ನಿಸಲಾಗುವುದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು. ಜುಲೈನಲ್ಲಿ ವಾಡಿಕೆಗಿಂತ ಶೇ.29ರಷ್ಟು ಅಧಿಕ ಮಳೆಯಾಗಿದ್ದರೆ, ಆಗಸ್ಟ್‌ನಲ್ಲಿ ಶೇ.73ರಷ್ಟು ಕೊರತೆಯಾಗಿ ಬೆಳೆ ಹಾನಿಯಾಗಿದೆ ಎಂದು ಸಚಿವರು ಹೇಳಿದರು. ಬಿತ್ತನೆ ಮಾಡಲು ಸಾಧ್ಯವಾಗದ 60,381 ರೈತರಿಗೆ ₹48 ಕೋಟಿ ಪರಿಹಾರ ನೀಡಲಾಗುತ್ತಿದೆ . ಇದೇ ವೇಳೆ ರಾಜ್ಯದಲ್ಲಿ ಕೃಷಿ ಇಲಾಖೆ ವಿಜಿಲೆನ್ಸ್ ಸೆಲ್ ₹5 ಕೋಟಿಗೂ ಹೆಚ್ಚು ಮೌಲ್ಯದ ಕಳಪೆ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರ ಹಾಗೂ ಕೀಟನಾಶಕಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ 148 ಪ್ರಕರಣಗಳನ್ನು ದಾಖಲಿಸಿದೆ ಎಂದು ಸಚಿವರು ಹೇಳಿದ್ದಾರೆ.
ಕೃಷಿ ಇಲಾಖೆ ನೀಡಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 118 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 89% ಬಿತ್ತನೆಯಾಗಿದೆ ಎಂದು ವರದಿ ಮಾಡಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 39.74 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ಹಾಗೂ 1.82 ಲಕ್ಷ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಸೇರಿದಂತೆ ಒಟ್ಟು 41.52 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಒಟ್ಟು ನಷ್ಟವು ಕ್ರಮವಾಗಿ ₹ 3,824 ಕೋಟಿ ಮತ್ತು ₹ 206 ಕೋಟಿ ಎಂದು ಅಂದಾಜಿಸಲಾಗಿದೆ ಕೃಷಿ ಸಚಿವ ಚೆಲುವನಾರಾಯಣ ಸ್ವಾಮಿ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…