ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.
ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…