ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 30 ದಿನದೊಳಗೆ ವಿದ್ಯುದೀಕರಣ ಸಂಪರ್ಕ

January 24, 2022
8:45 PM

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಠೇವಣಿ ಹಣ ಜಮಾ ಆದ 30 ದಿನಗಳೊಳಗೆ ವಿದ್ಯುದೀಕರಣ ಸಂಪರ್ಕ ಕಲ್ಪಿಸಬೇಕೆಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಧನ ಸಹಾಯ ಮಾಡಲಾಗುತ್ತದೆ. ಮಾತ್ರವಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ‌ ತಕ್ಷಣ ಸಂಪರ್ಕ ಕಲ್ಪಿಸಲಾಗುವುದು. ಅರ್ಜಿಯ ಜೊತೆ 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಬೇಕಾಗುತ್ತದೆ. ರೈತರು 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಿದ ನಂತರ 30 ದಿನಗಳೊಳಗೆ ವಿದ್ಯುದೀಕರಣ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿವರೆಗೆ ಸಾಲಸೌಲಭ್ಯವೂ ಇರುತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕರಣ ಬಾಬ್ತು ಒಳಗೊಂಡಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror