ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಠೇವಣಿ ಹಣ ಜಮಾ ಆದ 30 ದಿನಗಳೊಳಗೆ ವಿದ್ಯುದೀಕರಣ ಸಂಪರ್ಕ ಕಲ್ಪಿಸಬೇಕೆಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಧನ ಸಹಾಯ ಮಾಡಲಾಗುತ್ತದೆ. ಮಾತ್ರವಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ತಕ್ಷಣ ಸಂಪರ್ಕ ಕಲ್ಪಿಸಲಾಗುವುದು. ಅರ್ಜಿಯ ಜೊತೆ 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಬೇಕಾಗುತ್ತದೆ. ರೈತರು 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಿದ ನಂತರ 30 ದಿನಗಳೊಳಗೆ ವಿದ್ಯುದೀಕರಣ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿವರೆಗೆ ಸಾಲಸೌಲಭ್ಯವೂ ಇರುತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕರಣ ಬಾಬ್ತು ಒಳಗೊಂಡಿರುತ್ತದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…