ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.
250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.
ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…
ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ…