ಹೆಚ್ಚುತ್ತಿರುವ ದರ ಮತ್ತು ಪೂರೈಕೆಯಲ್ಲಾಗುತ್ತಿರುವ ವ್ಯತ್ಯಾಸದಿಂದಾಗಿ ಈ ಬಾರಿ ರಸಗೊಬ್ಬರ ಕೊರತೆ ಎದುರಾಗಬಹುದೆಂಬ ಆತಂಕ ರೈತ ಸಮುದಾಯವನ್ನು ಕಾಡುತ್ತಿದೆ. ಕೆಲವೆಡೆ ರಸಗೊಬ್ಬರ ಪೂರೈಕೆಯಾದ ತಕ್ಷಣವೇ ಖಾಲಿಯಾಗುತ್ತಿದೆ. ರಸಗೊಬ್ಬರ ದುಬಾರಿಯಾಗಿರುವುದರ ಮಧ್ಯೆ ಅದರ ಕೊರತೆಯೂ ಎದುರಾದರೆ ಹೇಗೆ ಎಂಬ ಚಿಂತೆ ಕೃಷಿಕರನ್ನು ಕಾಡುತ್ತಿದೆ. ಆದರೆ ಕೃಷಿ ಇಲಾಖೆ ಅಧಿಕಾರಿಗಳ ಪ್ರಕಾರ ರಾಜ್ಯದಲ್ಲಿ ರಸಗೊಬ್ಬರ ಅಭಾವ ಎದುರಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಾಕಷ್ಟು ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel