ದೇಶದಲ್ಲಿ ಕೃಷಿ ಕ್ಷೇತ್ರದ ಬೆಳವಣಿಗೆಗೆ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ರೈತರು ಹಾಗೂ ಕೃಷಿ ಉತ್ಪನ್ನಗಳ ಕಂಪನಿಗಳಿಗೆ ಉತ್ತೇಜನ ನೀಡಲು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರದ ಜೊತೆ ಸರ್ಕಾರೇತರ ಕೃಷಿ ಉತ್ಪನ್ನಗಳ ಕಂಪನಿಗಳು ದೇಶದ ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿ ಪಡಿಸುವಲ್ಲಿ ಶ್ರಮಿಸುತ್ತಿವೆ ಹಾಗೂ ರೈತರಿಗೆ ಅಗತ್ಯವಾದ ಮಾರುಕಟ್ಟೆಗಳನ್ನು ಕಲ್ಪಿಸುತ್ತಿವೆ ಎಂದು ಕೇಂದ್ರ ಜವಳಿ ಖಾತೆ ಸಚಿವ ಗಿರಿರಾಜ್ ಸಿಂಗ್ ಹೇಳಿದರು.
ಅವರಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕೃಷಿ ಸಂಬಂಧಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮ ಸಹಯೋಗದೊಂದಿಗೆ ಕೃಷಿ ಪ್ರಗತಿಗಾಗಿ ಅಭಿವೃದ್ಧಿದಾಯಕ ಯೋಜನೆಗಳನ್ನು ರೂಪಿಸಿದ್ದು, ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿವೆ. ಕೃಷಿ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಖಾಸಗಿ ಸಂಸ್ಥೆಗಳು ಕೃಷಿಯನ್ನು ಆಧುನೀಕರಣಗೊಳಿಸಿ ರೈತರ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಹಾಗೂ ಉತ್ತಮ ಬೆಲೆ ದೊರೆಯಲು ಸಹಕರಿಸುತ್ತಿವೆ ಎಂದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…