Advertisement
ಸುದ್ದಿಗಳು

ಕೃಷಿ ಮೇಳ -2025 | ಕೃಷಿ – ಸ್ವಾವಲಂಬಿ ಭಾರತದ ಆಧಾರಸ್ತಂಭ

Share

ಭಾರತೀಯ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಅಭಿವೃದ್ಧಿಗಾಗಿ, ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿದ್ದು, ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ಧಾರವಾಡದ ಕೃಷಿ ವಿಜ್ಞಾನ ವಿಶ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾಗಿರುವ ಕೃಷಿ ಮೇಳ -2025 ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಯುವಕರು ಮತ್ತು ಮಹಿಳೆಯರು ಉದ್ಯಮಶೀಲತೆ ಮತ್ತು ನಾವೀನ್ಯತೆಯೊಂದಿಗೆ ಮುಂಬರುವ ಅವಶ್ಯಕತೆಯಿದೆ. ಕೃಷಿ ನವೋದ್ಯಮಗಳು, ಸಂಸ್ಕರಣಾ ಘಟಕಗಳು, ಕೃಷಿ ಪ್ರವಾಸೋದ್ಯಮದಂತಹ ಕ್ಷೇತ್ರಗಳು ಯುವಕರನ್ನು ಆಕರ್ಷಿಸುತ್ತಿವೆ ಎಂದರು. ಕೃಷಿ ಸ್ವಾವಲಂಬಿ ಭಾರತದ ಆಧಾರ ಸ್ತಂಭ, ರೈತರು ಸ್ವಾವಲಂಬಿಗಳಾದಾಗ ರಾಷ್ಟ್ರ ಸ್ವಾವಲಂಬಿಯಾಗುತ್ತದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಬೀಜಗಳು ಉತ್ತಮ ತಂತ್ರಜ್ಞಾನ, ನ್ಯಾಯಯುತ ಬೆಲೆ ಮತ್ತು ಮಾರುಕಟ್ಟೆಗೆ ನೇರ ಪ್ರವೇಶ ಮುಖ್ಯವಾಗುತ್ತವೆ ಎಂದರು.

ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ  ಆರಂಭಗೊಂಡಿರುವ ಕೃಷಿ ಮೇಳದಲ್ಲಿ ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಈ ಬಾರಿ ಫಲ ಪುಷ್ಪ ಪ್ರದರ್ಶನದಲ್ಲಿ ಕಾಳುಗಳಲ್ಲಿ, ಸಿರಿದ್ಯಾನಗಳಲ್ಲಿ ಯಕ್ಷಗಾನ ಕಲಾಕೃತಿ ಮೂಡಿ ಬಂದು ಜನರನ್ನು ಆಕರ್ಷಿಸಿದೆ.  ಈ ಬಾರಿಯ ಕೃಷಿ ಮೇಳದ ಪುಷ್ಪ ಪ್ರದರ್ಶನದಲ್ಲಿ ಹೂವಿನ ಲೋಕವೇ ಅನಾವರಣಗೊಂಡಿದೆ. ಮತ್ತೊಂದೆಡೆ 20 ಕ್ಕೂ ಹೆಚ್ಚು ಹಣ್ಣುಗಳು, ತರಕಾರಿಗಳು  ಪ್ರದರ್ಶನದಲ್ಲಿ ಕಂಡುಬಂದವು ವಿಶೇಷವಾಗಿ, ಕಲ್ಲಗಂಡಿ ಹಣ್ಣಿನಲ್ಲಿ ದೇಶದ ಪ್ರಮುಖ ಗಣ್ಯರಾದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಸ್ವಾಮಿ ವಿವೇಕಾನಂದ, ಸುಭಾಷಚಂದ್ರ ಬೋಸ್, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ನಟ ಪುನೀತ್ ರಾಜ್‌ಕುಮಾರ್ ಸೇರಿದಂತೆ ವಿವಿಧ ಗಣ್ಯರ ಪ್ರತಿಮೆಗಳು ಕಂಗೊಳಿಸುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?

ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…

7 hours ago

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

16 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

16 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

17 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

17 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

17 hours ago