ರೈತನ ಕಲ್ಯಾಣಕ್ಕಾಗಿಯೇ ಕೇಂದ್ರ ಸರ್ಕಾರ ಹೊಸ ಕೃಷಿ ಮಸೂದೆ | ಬಿಜೆಪಿ ರೈತ ಮೋರ್ಚಾ

September 23, 2020
3:50 PM
ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಸರಕಾರವು ಜಾರಿಗೆ ತಂದಿರುವ ಕೃಷಿಕರ ಮತ್ತು ಕೃಷಿ ಕ್ಷೇತ್ರದ ಸುಧಾರಣೆ ಮಾಡಲಿರುವ ಮಹತ್ವದ ಕಾಯ್ದೆಯನ್ನು ದ.ಕ. ಜಿಲ್ಲಾ ಬಿಜೆಪಿ ರೈತಮೋರ್ಚಾ ಸ್ವಾಗತಿಸಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರಕಾರವನ್ನು ಅಭಿನಂದಿಸಿದೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಎ.ವಿ. ತೀರ್ಥರಾಮ, ರೈತನ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ದೇಶದ ಕೃಷಿ ಉತ್ಪನ್ನಕ್ಕಾಗಿ ಮಾರುಕಟ್ಟೆ ಸೃಷ್ಠಿಸುವ ಇರಾದೆಯಿಂದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಸಾಧ್ಯತೆ ಇರುವ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದೆ. ರೈತರ ಉತ್ಪನ್ನ, ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆಯು ರೈತರಿಗೆ ಮುಕ್ತವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ. ಅದೇ ರೀತಿ ವ್ಯಾಪಾರಿಗಳಿಗೂ ತಮಗೆ ಬೇಕಾದ ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಖರೀದಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ರೈತನ ಆರ್ಥಿಕ ಅಭಿವೃದ್ಧಿಯ ದೃಷ್ಠಿಕೋನದಿಂದ ಈ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿ ಮಾಡಲು ಉದ್ದೇಶಿಸಿದೆ.
ರೈತರ ಕಲ್ಯಾಣ ಮತ್ತು ರಕ್ಷಣೆ, ಬೆಲೆ ಭರವಸೆ ಮತ್ತು ಸೇವಾ ಒಪ್ಪಂದವನ್ನು ಈ ಮಸೂದೆ ಕಾರ್ಯಗತ ಮಾಡಲಿದೆ. ನ್ಯಾಯದರದ ಚೌಕಟ್ಟಿನೊಳಗೆ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಕೃಷಿ ಸೇವೆಗಳನ್ನು ಒದಗಿಸುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ಈ ಮಸೂದೆಯಿಂದ ಕೃಷಿ ವಲಯದಲ್ಲಿ ಮಹತ್ವದ ಸುಧಾರಣೆಯಾಗಲಿದೆ. ಕೃಷಿ ವಲಯದಿಂದ ಆರ್ಥಿಕತೆ ಹೆಚ್ಚಾಗಲಿದೆ. ವಿವಿಧ ರಾಜ್ಯಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ನಿಯಮಗಳ ಹೊರತಾಗಿಯೂ ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ ಈ ಕಾಯ್ದೆ ನೀಡುತ್ತದೆ. ರೈತರಿಗೆ ಮೋಸ ಮಾಡುವ ದಲ್ಲಾಳಿಗಳ ಹಾಗೂ ಖರೀದಿ ದಾರರ ಪರವಾಗಿ ವಿಪಕ್ಷಗಳು ಈ ರೈತಪರ ಕಾಯ್ದೆಯನ್ನು ವಿರೋಧಿಸುತ್ತವೆ. ಪ್ರತಿಪಕ್ಷಗಳ ಈ ನಿಲುವನ್ನು ಬಿಜೆಪಿ ರೈತ ಮೋರ್ಚಾ ಖಂಡಿಸುತ್ತದೆ ಎಂದರು.
 ದ.ಕ. ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಭಟ್, ಪುತ್ತೂರು ಮಂಡಲ ರೈತಮೋರ್ಚಾ ಅಧ್ಯಕ್ಷ ಸುರೇಶ ಕಣ್ಣರಾಯ, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.
ಬಿಜೆಪಿ ರೈತ ಮೋರ್ಚಾ ಪತ್ರಿಕಾಗೋಷ್ಟಿ 

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group