ಅಡಿಕೆ ಪ್ರತ್ಯೇಕಿಸಲು ಎಐ ಚಾಲಿತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ ಸಂಸ್ಥೆ

January 6, 2026
9:58 PM

ಅಡಿಕೆ ಬೆಳೆಗಾರರಿಗೆ ನೂತನ ತಂತ್ರಜ್ಞಾನವೊಂದನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆಯಲ್ಲಿ ಅಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಅಭಿವೃದ್ಧಿಪಡಿಸಿದೆ. ಚಾಲಿ ಅಡಿಕೆ ಸುಲಿದ ಬಳಿಕ ಗುಣಮಟ್ಟದ ಅಡಿಕೆ, ಪಠೋರ, ಕೋಕಾ ಪ್ರತ್ಯೇಕಿಸಲು ಅಥವಾ ವಿಂಗಡಿಸಲು ಎಐ ಚಾಲಿತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಮಾದರಿಯು ಇದೀಗ ಗಮನ ಸೆಳೆದಿದೆ.

ಅಡಿಕೆ ಹಾಳೆತಟ್ಟೆ ಉದ್ಯಮವನ್ನು ನಡೆಸುತ್ತಿರುವ ನಿಡ್ಲೆಯ ಅಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವಿನಾಶ್ ರಾವ್ ಹಾಗೂ ಸಹ-ಸಂಸ್ಥಾಪಕ ಅತಿಶಯ ಜೈನ್‌ ಅವರು ಎರಡು ವರ್ಷಗಳ ಹಿಂದೆ ಗುಣಮಟ್ಟದ ಆಧಾರದ ಮೇಲೆ ಹಾಳೆತಟ್ಟೆ ಬೇರ್ಪಡಿಸಲು ಎಐ ತಂತ್ರಜ್ಞಾನ ಆಧಾರಿತ ತಂತ್ರಜ್ಞಾನವನ್ನು ಬಳಸಿದ್ದರು. ಅದಾದ ಬಳಿಕ ಅದೇ ತಂಡವು ಅಡಿಕೆ ವಿಭಾಗಿಸಲು ಎಐ ತಂತ್ರಜ್ಞಾನ ಬಳಕೆ ಮಾಡಿ ಪ್ರಾಯೋಗಿಕವಾಗಿ ಅಭಿವೃದ್ಧಿಪಡಿಸಿದ್ದಾರೆ.  ಸದ್ಯ ಶೇ.80 ರಷ್ಟು ಅಡಿಕೆ ದರ್ಜೆಯನ್ನು, ಗುಣಮಟ್ಟವನ್ನು ಎಐ ಆಧಾರಿತವಾಗಿ  ಪತ್ತೆ ಮಾಡುತ್ತದೆ. ಇನ್ನೂ ಅಭಿವೃದ್ಧಿಪಡಿಸಲು ಇನ್ನೂ ಆರು ತಿಂಗಳುಗಳು ಬೇಕಾಗುತ್ತದೆ. ಇತರ ದರ್ಜೆಯ ಅಡಿಕೆಯನ್ನು ಗುರುತಿಸಲು ಮತ್ತು ವಿಂಗಡಿಸಲು ತಂತ್ರಜ್ಞಾನವನ್ನು ಮತ್ತಷ್ಟು ಅಭಿವೃದ್ಧಿಪಡಿಸಬಹುದು ಎಂದು ಅವಿನಾಶ್‌ ರಾವ್‌ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

ಅಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಕಾರ್ಯಚಟುವಟಿಕೆಯನ್ನು ವೀಕ್ಷಿಸಲು ಅಡಿಕೆ ವಲಯದ ಸಹಕಾರಿ ಸಂಸ್ಥೆಗಳು ಹಾಗೂ ಪ್ರಮುಖರು ನಿಡ್ಲೆಯ ಕಂಪೆನಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ಆರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷ ಎಸ್‌ ಆರ್‌ ಸತೀಶ್ಚಂದ್ರ,  ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕ್ಯಾಂಪ್ಕೋ ಎಂಡಿ ಸತ್ಯನಾರಾಯಣ,   ಶಿರಸಿಯ ಟಿಎಸ್‌ಎಸ್‌ ಅಧ್ಯಕ್ಷ  ಗೋಪಾಲಕೃಷ್ಣ ವೈದ್ಯ, ತುಮ್ಕೋಸ್‌ ಅಧ್ಯಕ್ಷ ಶಿವಕುಮಾರ್, ಮ್ಯಾಮ್ಕೋಸ್‌ ಅಧ್ಯಕ್ಷ ಉಪಾಧ್ಯಕ್ಷ ವಿ.ಪಿ.ಮಹೇಶ್, ಅಖಿಲ ಭಾರತ ಅಡಕೆ ಬೆಳೆಗಾರರ ​​ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ, ನಿವೃತ್ತ ಉಪನ್ಯಾಸಕ ವಿಘ್ನೇಶ್ವರ ಭಟ್‌ ವರ್ಮುಡಿ, ಸಂಶೋಧಕ ಬದನಾಜೆ ಶಂಕರ ಭಟ್‌, ಎಆರ್‌ಡಿಎಫ್‌ ಕಾರ್ಯನಿರ್ವಹಣಾಧಿಕಾರಿ ಡಾ.ಕೇಶವ ಭಟ್‌ ಮೊದಲಾದವರು ಇದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ
ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ
January 7, 2026
10:04 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror