ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಗ್ರಿಶೂರ್ ಯೋಜನೆಯನ್ನು ಅನಾವರಣಗೊಳಿಸಿದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ರಾಷ್ಟ್ರೀಯ ಬ್ಯಾಂಕ್- ನಬಾರ್ಡ್ ನ ಸಹಾಯದಿಂದ ಯೋಜನೆ ರೂಪಿಸಿದ್ದು, ಇದಕ್ಕಾಗಿ 750 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ರೈತರು ಈ ಯೋಜನೆ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೈತ ರಾಜು, ಅಗ್ರಿಶೂರ್ ಯೋಜನೆಯಡಿ ಕೃಷಿ ಮಾರುಕಟ್ಟೆಗಳಲ್ಲಿ ಹೆಚ್ಚು ಶೀಥಲ ಘಟಕಗಳನ್ನು ಪ್ರಾರಂಭಿಸುವುದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದರು.
ಕೋಲಾರದ ಹಿರಿಯ ಕೃಷಿ ವಿಜ್ಞಾನಿ ಶಿವಾನಂದ ಹೊಂಗಲ್ ಮಾತನಾಡುತ್ತಾ, ದೇಶದಲ್ಲಿ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಹೆಚ್ಚಿಸುವುದು ಇಂದಿನ ಆದ್ಯತೆಯಾಗಿದೆ. ಇದಕ್ಕಾಗಿ ಅಗ್ರಿಶೂರ್ ಯೋಜನೆ ಜಾರಿಗೊಳಿಸಲಾಗಿದ್ದು, ಸಂಶೋಧನೆ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel