ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9 ಲಕ್ಷ ರೂಪಾಯಿ ಮತ್ತು ಕೇಂದ್ರ ಸರ್ಕಾರ 6 ಲಕ್ಷ ಸೇರಿ ಒಟ್ಟು 15 ಲಕ್ಷ ರೂಪಾಯಿ ಸಬ್ಸಿಡಿ ಹಣ ಸಿಗಲಿದೆ. ಇದಕ್ಕಾಗಿ 206 ಕೋಟಿ ರೂಪಾಯಿ ಹಣವನ್ನು ಮೀಸಲಿರಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ರೈತ ಉತ್ಪಾದಕ ಕಂಪನಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ರೈತರು ಶ್ರದ್ಧೆ ಮತ್ತು ಪರಿಶ್ರಮದಿಂದ ವ್ಯವಸಾಯ ಮಾಡುವ ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಕೃಷಿ ಭೂಮಿಯನ್ನು ನಂಬಿ, ಬದ್ಧತೆ, ಆಸಕ್ತಿ ಮತ್ತು ಶ್ರಮದಿಂದ ವ್ಯವಸಾಯ ಮಾಡುವ ರೈತರಿಗೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…