Advertisement
MIRROR FOCUS

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

Share

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು ರೊಬೊಟಿಕ್ಸ್ ಅನ್ನು ಪರಿಚಯಿಸುವ ಗುರಿಯನ್ನು ಹೊಂದಿರುವ  ಮಹಾಅಗ್ರಿ-ಎಐ ನೀತಿಯನ್ನು ಮಹಾರಾಷ್ಟ್ರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಂಪುಟದಲ್ಲೂ ಅನುಮೋದನೆ ನೀಡಲಾಗಿದೆ.

ಡಿಜಿಟಲ್ ಯುಗದಲ್ಲಿ ಕೃಷಿ ವಲಯವನ್ನು ಕೂಡಾ ಶಕ್ತಿಶಾಲಿಯಾಗಿಸಲು ಮತ್ತು ರೈತರು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ(AI),  ಡ್ರೋನ್‌ಗಳು, ಕಂಪ್ಯೂಟರ್ ವಿಷನ್, ರೊಬೊಟಿಕ್ಸ್ ಮತ್ತು  ಹವಾಮಾನ ವಿಶ್ಲೇಷಣೆಯಂತಹ  ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಪ್ರೋತ್ಸಾಹಿಸಲು ಮಹಾರಾಷ್ಟ್ರ ಸರ್ಕಾರ ಯೋಜನೆ ರೂಪಿಸಿದೆ, ಈ ನೀತಿಯ ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ರೂ.ಗಳನ್ನುಕೂಡಾ ಮೀಸಲಿಟ್ಟಿದೆ.

ಸಾಂಪ್ರದಾಯಿಕ ಕೃಷಿಗಿಂತ ಭಿನ್ನವಾಗಿ, ತಂತ್ರಜ್ಞಾನದಿಂದ ರೈತರಿಗೆ ಲಾಭ ಪಡೆಯಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಈ ನೀತಿ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.

ಇಲ್ಲಿAI  ಸಹಾಯದಿಂದ, ಮರಾಠಿ ಭಾಷೆಯಲ್ಲಿ ಚಾಟ್‌ಬಾಟ್‌ಗಳು ಮತ್ತು ಧ್ವನಿ ಸಹಾಯಕಗಳನ್ನು ಬಳಸಿಕೊಂಡು ರೈತರಿಗೆ  ಸಲಹೆಯನ್ನು ನೀಡಲಾಗುವುದು. ಇದು ಬೆಳೆ ಉತ್ಪಾದನೆ, ರೋಗ ಮತ್ತು ಕೀಟ ನಿರ್ವಹಣೆ, ಹವಾಮಾನ ಮುನ್ಸೂಚನೆಗಳು, ಮಾರುಕಟ್ಟೆ ಬೆಲೆಗಳು ಮತ್ತು ಸರ್ಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಇದರ ಜೊತೆಗೆ ಈ ವೇದಿಕೆಯು ಕೃಷಿ ಭೂಮಿಯಿಂದ ಗ್ರಾಹಕರವರೆಗಿನ ಎಲ್ಲಾ ಮಾಹಿತಿಯನ್ನು , ಬೆಳೆಗಳಿಗೆ ಬಳಸಲಾದ ರಸಗೊಬ್ಬರಗಳು ಮತ್ತು ಕೀಟನಾಶಕಗಳು, ಕೃಷಿ ಪದ್ಧತಿಗಳು, ಕೊಯ್ಲಿನ ನಂತರದ ಸಂಸ್ಕರಣೆ ಮತ್ತು ಗುಣಮಟ್ಟದ ಪ್ರಮಾಣಪತ್ರಗಳು ಸೇರಿದಂತೆ ಇತರ ವಿವರಗಳ ಡಿಜಿಟಲ್ ಮತ್ತು ಜಿಯೋ-ಟ್ಯಾಗ್ ಮಾಡಿದ ದಾಖಲೆಯನ್ನು ಕೂಡಾ ಸಹ ರಚಿಸುತ್ತದೆ. ಇದು ಮಾರುಕಟ್ಟೆಗೂ ಅನುಕೂಲವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

8 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

17 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago