Advertisement
MIRROR FOCUS

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

Share

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ ಸಾಧ್ಯವಾಗಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ. ಮುಂಬೈನಲ್ಲಿ ನಡೆದ AI4Agri 2026 ಸಮಾವೇಶದಲ್ಲಿ ಅವರು ಮಾತನಾಡಿದರು.

ಎಐ ಬಳಕೆ ಮೂಲಕ ಹವಾಮಾನ ಅನಿಶ್ಚಿತತೆ, ಮಾಹಿತಿ ಕೊರತೆ ಮತ್ತು ಮಾರುಕಟ್ಟೆ ಸಮಸ್ಯೆಗಳಂತಹ ಕೃಷಿಯ ಮೂಲಭೂತ ಸವಾಲುಗಳಿಗೆ ಪರಿಹಾರ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ. ಇದರಿಂದ ಕೃಷಿ ಉತ್ಪಾದಕತೆ ಹೆಚ್ಚಿಸಿ ರೈತರ ಆದಾಯವನ್ನು ಹೆಚ್ಚಿಸಲು ಸಾಧ್ಯವಾಗಲಿದೆ.

ಭಾರತದ ಸುಮಾರು 14 ಕೋಟಿ ಕೃಷಿ ಹೋಲ್ಡಿಂಗ್‌ಗಳ ರೈತರಿಗೆ ಎಐ ಆಧಾರಿತ ಸಲಹೆಗಳು ನೀಡಿದರೆ, ಪ್ರತಿ ರೈತನಿಗೆ ವರ್ಷಕ್ಕೆ ಸರಾಸರಿ ₹5,000 ಉಳಿತಾಯ ಸಾಧ್ಯವಾಗುತ್ತದೆ. ಇದರಿಂದ ಒಟ್ಟಾರೆ ₹70,000 ಕೋಟಿ ಹೆಚ್ಚುವರಿ ಮೌಲ್ಯ ಸೃಷ್ಟಿಯಾಗಬಹುದು ಎಂದು ಸಚಿವರು ತಿಳಿಸಿದ್ದಾರೆ.

‘Agri Param’ ಎಂಬ AI ಮಾದರಿ ಈಗಾಗಲೇ 22 ಭಾರತೀಯ ಭಾಷೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರೈತರಿಗೆ ತಮ್ಮ ಭಾಷೆಯಲ್ಲೇ ಕೃಷಿ ಸಲಹೆಗಳನ್ನು ನೀಡುತ್ತಿದೆ. ಇದು ರೈತರಿಗೆ ಸುಲಭವಾಗಿ ತಂತ್ರಜ್ಞಾನ ಬಳಸಲು ಸಹಾಯ ಮಾಡಲಿದೆ. ಡ್ರೋನ್ ಮತ್ತು ಉಪಗ್ರಹ ತಂತ್ರಜ್ಞಾನ ಬಳಸಿ ಮಣ್ಣಿನ ಆರೋಗ್ಯ, ಭೂಮಿಯ ಮಾಹಿತಿ ಮತ್ತು ಬೆಳೆ ಪರಿಸ್ಥಿತಿಯನ್ನು ನಿಖರವಾಗಿ ತಿಳಿಯಲು ಸಾಧ್ಯವಾಗುತ್ತಿದೆ. ಇದರಿಂದ ರೈತರು ಮುಂಚಿತವಾಗಿ ನಿರ್ಧಾರ ತೆಗೆದುಕೊಳ್ಳಲು ಸಹಾಯವಾಗಲಿದೆ.ಕೇಂದ್ರ ಸರ್ಕಾರ ರಾಷ್ಟ್ರೀಯ ಮಟ್ಟದಲ್ಲಿ Agri-AI Research Network ಹಾಗೂ Agri Data Commons ನಿರ್ಮಿಸಲು ಯೋಜನೆ ರೂಪಿಸಿದೆ. ಇದರಿಂದ ಕೃಷಿಗೆ ಸಂಬಂಧಿಸಿದ ಡೇಟಾ, ಸಂಶೋಧನೆ ಮತ್ತು AI ತಂತ್ರಜ್ಞಾನವನ್ನು ಒಂದೇ ವೇದಿಕೆಯಲ್ಲಿ ಒದಗಿಸಲು ಸಾಧ್ಯವಾಗಲಿದೆ ಎಂದರು.

ಈ ಕ್ರಮಗಳಿಂದ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಿಸಿ, ರೈತರ ಆದಾಯ ಹೆಚ್ಚಿಸುವುದು ಹಾಗೂ ಕೃಷಿಯನ್ನು ಹೆಚ್ಚು ಲಾಭದಾಯಕ ಕ್ಷೇತ್ರವನ್ನಾಗಿ ರೂಪಿಸುವುದು ಸರ್ಕಾರದ ಗುರಿಯಾಗಿದೆ.

Union Minister Dr. Jitendra Singh said AI will drive India’s next agricultural revolution and could generate ₹70,000 crore in annual value for farmers. AI tools will help farmers improve productivity, predict pests, and access advisory services in local languages. The government is also planning a National Agri-AI Research Network and data framework to strengthen technology-driven farming.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

7 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

7 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

21 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago