ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಡುಗೆ ಎಣ್ಣೆ ಹಾಗೂ ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ನೀಡಲಾಗಿದೆ.ಪ್ರಸಕ್ತ ಸಾಲಿನಿಂದ 2030-31ರವರೆಗೆ ಏಳು ವರ್ಷಗಳಲ್ಲಿ ಎಣ್ಣೆ ಕಾಳುಗಳ ಉತ್ಪಾದನೆ ಮತ್ತು ಅಡುಗೆ ಎಣ್ಣೆ ತಯಾರಿಕೆಯಲ್ಲಿ ಆತ್ಮ ನಿರ್ಭರತೆ ಸಾಧಿಸುವ ಕಾರ್ಯ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ 10 ಸಾವಿರದ 103 ಕೋಟಿ ರೂಪಾಯಿಗಳ ಹಣಕಾಸು ಸೌಲಭ್ಯವನ್ನು ಒದಗಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆಯಲ್ಲಿ ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬೆಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.2004ರಲ್ಲಿ ತಮಿಳಿಗೆ, 2005ರಲ್ಲಿ ಸಂಸ್ಕೃತಕ್ಕೆ, 2008ರ ಅಕ್ಟೋಬರ್ 31ರಂದು ಕನ್ನಡ ಮತ್ತು ತೆಲುಗಿಗೆ , 2013ರಲ್ಲಿ ಮಳಿಯಾಲಂಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿತ್ತು. ಈಗ ಹೊಸದಾಗಿ ಐದು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನದ ಗೌರವವನ್ನು ನೀಡುವ ಮೂಲಕ ಒಟ್ಟು 11 ಭಾಷೆಗಳನ್ನು ಶಾಸ್ತ್ರೀಯ ಪಟ್ಟಿಗೆ ಸೇರಿಸಲಾಗಿದೆ.
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಕೃಷೋನ್ನತಿ ಹಾಗೂ ಸುಸ್ಥಿರ ಕೃಷಿ ಅಭಿವೃದ್ಧಿ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದ್ದು, ಒಂದು ಲಕ್ಷ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದರು.
ಆಹಾರ ಖಾದ್ಯವಾಗಿ ಅಡುಗೆ ಎಣ್ಣೆಗೆ ಬಹಳಷ್ಟು ಬೇಡಿಕೆ ಇದೆ. ಇದಕ್ಕಾಗಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈಗಾಗಲೇ ತಾಳೆ ಕೃಷಿಯತ್ತ ಗಮನಹರಿಸಲಾಗಿದೆ. ಇನ್ನಷ್ಟು ವಿಸ್ತರಣೆಯಾಗುವ ಸಾಧ್ಯತೆ ಇದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…