Advertisement
ಅಂತಾರಾಷ್ಟ್ರೀಯ

ಸೌರ ವಿದ್ಯುತ್ ಉತ್ಪಾದನೆಯತ್ತ ಒಲವು | ಕಾರ್ಬನ್  ಡೈ ಆಕ್ಸೈಡ್ ತಗ್ಗಿಸುವ ಗುರಿ

Share

ಇಂಧನ ಕ್ಷೇತ್ರದಲ್ಲಿ ಭಾರತ ಜಾಗತಿಕವಾಗಿ ಮುಂಚೂಣಿಯಲ್ಲಿದೆ. ವಿಶೇಷವಾಗಿ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯ ಪ್ರಗತಿ ಕಾಣುತ್ತಿದೆ. ಬಜೆಟ್ ನಲ್ಲಿ ಇಂಧನ ವಲಯಕ್ಕೆ ಹೆಚ್ಚು ಮಹತ್ವ ನೀಡಲಾಗಿದ್ದು, ಬಜೆಟ್ ನಲ್ಲಿ ಘೋಷಿಸಿರುವ ಹೊಸ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಸೌರ ಉತ್ಪಾದನೆಗೆ ಸರ್ಕಾರ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಇಂಧನ ಸಚಿವ ಪ್ರಲ್ಹಾದ್ ಜೋಶಿ  ಹೇಳಿದರು.

ಅಂತಾರಾಷ್ಟ್ರೀಯ ಸೌರ ಒಕ್ಕೂಟದ 7ನೇ ಅಧಿವೇಶನ ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಿತು. ಇಂಧನ ಲಭ್ಯತೆ, ಭದ್ರತೆ ಮತ್ತು ಸಂಪ್ರದಾಯಿಕ ಇಂಧನಗಳ ಮೇಲೆ ಪರಿಣಾಮ ಬೀರುವ ಉಪಕ್ರಮಗಳ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದಲ್ಲದೆ, ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಸೌರ ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ಕೊಡುವ ಅಂಶಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.

2030ರ ವೇಳೆಗೆ ಸೌರಶಕ್ತಿ  ಪರಿಹಾರಗಳಲ್ಲಿ  ಒಂದು ಸಾವಿರ ಶತಕೋಟಿ ಡಾಲರ್  ಹೂಡಿಕೆಯನ್ನು ಸಜ್ಜುಗೊಳಿಸುವ ಗುರಿ ಹೊಂದಿರುವ ಟುವರ್ಡ್ಸ್  ಸಾವಿರ ಕಾರ್ಯತಂತ್ರದ ಕಡೆಗೆ ಅಂತಾರಾಷ್ಟ್ರೀಯ ಸೌರ ಒಕ್ಕೂಟ  ಮಾರ್ಗದರ್ಶನ ನೀಡಿದೆ. ಒಂದು ಸಾವಿರ ದಶಲಕ್ಷ ಜನರಿಗೆ ಇಂಧನದ ಲಭ್ಯತೆ ಒದಗಿಸುವುದು, ಒಂದು ಸಾವಿರ ಗಿಗಾವ್ಯಾಟ್ ಸೌರಶಕ್ತಿ  ಸಾಮರ್ಥ್ಯದ ಸ್ಥಾಪನೆ ಮತ್ತು ಪ್ರತಿವರ್ಷ ಒಂದು ಸಾವಿರ ಮೆಟ್ರಿಕ್ ಟನ್  ಇಂಗಾಲದ ಡೈ ಆಕ್ಸೈಡ್  ಹೊರ ಸೂಸುವಿಕೆ ತಗ್ಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.  ಅಧಿವೇಶನದಲ್ಲಿ 120 ಸದಸ್ಯ ರಾಷ್ಟ್ರಗಳ ಇಂಧನ ಸಚಿವರು, ಇಂಧನ ವಲಯದ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಉದ್ಯಮಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago