ದೇಶದಲ್ಲಿ ಇನ್ನು ಮುಂದೆ ಪ್ರಯಾಣಿಕ ಕಾರುಗಳಲ್ಲಿ ಆರು ಏರ್ ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅಕ್ಟೋಬರ್ 1 ರಿಂದ ಉತ್ಪಾದನೆಯಾಗುವ ಕಾರುಗಳಿಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ. ಕರಡು ನಿಯಮಗಳು ರಸ್ತೆ ಸುರಕ್ಷತಾ ಕ್ರಮಗಳ ಸರಣಿಯ ಭಾಗವಾಗಿದ್ದು, ಅಂತಿಮ ತೀರ್ಮಾನ ಹೊರ ಬೀಳಬೇಕಿದೆ.
ಆರು ಏರ್ ಬ್ಯಾಗ್ ರಚನೆಗೆ ಈಗಾಗಲೇ ಹೆಣಗಾಡುತ್ತಿರುವ ಕಂಪನಿಗಳಿಗೆ ಈ ನಿಯಮ ಇನ್ನಷ್ಟು ಒತ್ತಡವನ್ನು ಉಂಟು ಮಾಡಿದೆ. ಪ್ರಯಾಣಿಕ ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಪ್ಲಾನ್ ಬಗ್ಗೆ ಮಾರುತಿ ಸುಜುಕಿ ಕಳವಳ ವ್ಯಕ್ತಪಡಿಸಿದ್ದು ಸಂಭಾವ್ಯ ಖರೀದಿದಾರರು ದರ ದುಬಾರಿಯಾಗುವ ಕಾರಣ ಖರೀದಿಯಿಂದ ದೂರವಾಗಬಹುದು, ಮಾರಾಟದ ಮೇಲೆ ಪರಿಣಾಮ ಬೀರಲಿದೆ ಎಂದು ಮಾರುತಿ ಸುಜುಕಿ ಅಧ್ಯಕ್ಷ ಆರ್.ಸಿ. ಭಾರ್ಗವ ತಿಳಿಸಿದ್ದಾರೆ.
ಎಲ್ಲಾ ಕಾರುಗಳಲ್ಲಿ ಚಾಲಕ ಮತ್ತು ಮುಂಭಾಗದ ಪ್ರಯಾಣಿಕರ ಸೀಟಿಗೆ ಏರ್‌ಬ್ಯಾಗ್ ಕಡ್ಡಾಯವಾಗಿದೆ. ಇನ್ನೂ ನಾಲ್ಕು ಏರ್‌ಬ್ಯಾಗ್‌ಗಳನ್ನು ಸೇರಿಸುವುದರಿಂದ ವೆಚ್ಚವು 17,600 ರೂ. ನಷ್ಟು ಹೆಚ್ಚಾಗುತ್ತದೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…