ಶುಕ್ರವಾರ ತಡ ರಾತ್ರಿ 8.30ರ ಸುಮಾರಿಗೆ ಐಎಎಫ್ ಮಿಗ್-21 ವಿಮಾನವು ರಾಜಸ್ಥಾನದ ಜೈಸಲ್ಮೇರ್‌ನ ಇಂಡೋ-ಪಾಕ್ ಗಡಿ ಸಮೀಪದಲ್ಲಿ ಪತನಗೊಂಡಿದ್ದು ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Advertisement
ಸ್ಯಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೆಸರ್ಟ್ ನ್ಯಾಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್‌ಪಿ ಅಜಯ್ ಸಿಂಗ್ ಹೇಳಿದ್ದಾರೆ. ರಾಜಸ್ಥಾನದ ಪಶ್ಚಿಮ ವಲಯದಲ್ಲಿ ತರಬೇತಿ ವೇಳೆ ದುರ್ಘಟನೆ ಸಂಭವಿಸಿದೆ. ವಾಯುಸೇನೆ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶವನ್ನು ನೀಡಲಾಗಿದೆ.
ವಿಮಾನ ಅಪಘಾತದಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ಐಎಎಫ್ ತಿಳಿಸಿದೆ ಮತ್ತು ನಾವೆಲ್ಲರೂ ಕುಟುಂಬದೊಂದಿದೆ ದೃಢವಾಗಿ ನಿಂತಿದ್ದೇವೆ ಎಂದು ಐಎಎಫ್ ಟ್ವೀಟ್ ಮಾಡಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement