ವಾಯು ಮಾಲಿನ್ಯದ ದೃಷ್ಟಿಯಿಂದ ತಮ್ಮ ಸನ್ನದ್ಧತೆಯನ್ನು ಹೆಚ್ಚಿಸುವಂತೆ ಹಾಗೂ ವಾಯು ಮಾಲಿನ್ಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
Advertisement
ವಾಯುಮಾಲಿನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಗಳಿಗೆ ಪತ್ರ ಬರೆದಿದ್ದಾರೆ. ವಾಯು ಮಾಲಿನ್ಯವು ತೀವ್ರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಲಿದೆ. ಅಲ್ಲದೇ, ಉಸಿರಾಟ, ಹೃದಯರಕ್ತನಾಳ ಮತ್ತು ಸೆರೆಬ್ರೊವಾಸ್ಕುಲರ್ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಕಾಯಿಲೆಗಳನ್ನು ಉಲ್ಬಣಗೊಳಿಸುತ್ತದೆ. ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರ ಮೇಲೆ ಪ್ರತಿಕೂಲ ಪರಿಣಾಮ ತೀವ್ರವಾಗಿರುತ್ತವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement