ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ.
ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ವಿಮಾನವನ್ನು ವಾಪಸ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ವಿಮಾನದ ಒಂದು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ಹಾರಾಟ ನಡೆಸುತ್ತಿದ್ದಂತೆ ಸಮುದ್ರಮಟ್ಟದಿಂದ ಸುಮಾರು 1000 ಅಡಿ ಎತ್ತರದಲ್ಲಿ ಬೆಂಕಿಯ ಜ್ವಾಲೆ ಎಂಜಿನ್ ನಲ್ಲಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. ತಕ್ಷಣ ವಿಮಾನವನ್ನು ವಾಪಸ್ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ| ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ"