ಧಾರ್ಮಿಕ ಸ್ಥಳಗಳಿಂದ 71,000 ಧ್ವನಿವರ್ಧಕಗಳಿಗೆ ಕತ್ತರಿ ಹಾಕಿದ ಉತ್ತರ ಪ್ರದೇಶ ಸರ್ಕಾರ…! |

May 29, 2022
10:33 PM

ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 1.29 ಲಕ್ಷ ಧ್ವನಿವರ್ಧಕಗಳನ್ನು ತೆಗೆಯಲಾಗಿದೆ. ಕೆಲವುಗಳ ಡೆಸಿಬಲ್ ಮಟ್ಟವನ್ನು ಕಡಿಮೆ ಮಾಡಲಾಗಿದೆ. ಈ ಪೈಕಿ 71,114 ಧ್ವನಿವರ್ಧಕಗಳನ್ನು ವಿವಿಧ ಪೂಜಾ ಸ್ಥಳಗಳಿಂದಲೇ ತೆಗೆದುಹಾಕಲಾಗಿದೆ. ತೆಗೆದ ಧ್ವನಿವರ್ಧಕಗಳನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಶಾಲೆಗಳಿಗೆ ಸರ್ಕಾರವು ಹಸ್ತಾಂತರಿಸಿದೆ. 

ಶಾಲೆಗಳ ಬೆಳಗಿನ ಸಭೆಗಾಗಿ 4371 ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ನೀಡಲಾಯಿತು. ಉತ್ತರ ಪ್ರದೇಶದ ಗೃಹ ಇಲಾಖೆಯು ಏಪ್ರಿಲ್ 23 ರಂದು ಧಾರ್ಮಿಕ ಸ್ಥಳಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಲು ಆದೇಶವನ್ನು ನೀಡಿತ್ತು. ಸಿಎಂ ನಿರ್ದೇಶನಗಳು ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು  ಆಧರಿಸಿತ್ತು. ಈ ನೆಲೆಯಲ್ಲಿ ವಿವಿಧ ಸಮುದಾಯಗಳ ಧಾರ್ಮಿಕ ಮುಖಂಡರೊಂದಿಗೆ ಸಂವಾದ ಹಾಗೂ ಧ್ವನಿವರ್ಧಕಗಳ ಮೂಲಕ ಶಬ್ದ ಮಾಲಿನ್ಯದ ಬಗ್ಗೆ ಅರಿವು ಮೂಡಿಸುವ ಮೂಲಕ ಇಡೀ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ನಡೆಸಲಾಯಿತು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಧಾರ್ಮಿಕ ಮುಖಂಡರು ಧ್ವನಿವರ್ಧಕಗಳನ್ನು ತೆಗೆಸುವಲ್ಲಿ ಸಹಕಾರ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror