ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ (National Security Advisor) ಅಜಿತ್ ದೋವಲ್ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಜೂನ್ 10 ರಿಂದ ಜಾರಿಗೆ ಬರುವಂತೆ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಹಾಗೂ ಪಿ.ಕೆ.ಮಿಶ್ರಾ ಅವರನ್ನು ಪ್ರಧಾನ ಮಂತ್ರಿಗಳ(Prime Minister) ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ನರೇಂದ್ರ ಮೋದಿ(Narendra Modi) ಅವರು ಪ್ರಧಾನಿಯಾಗಿ ಅಧಿಕಾರದಲ್ಲಿ ಇರುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇವರು ತಮ್ಮ ಹುದ್ದೆಯಲ್ಲಿರುತ್ತಾರೆ ಎಂದು ನೇಮಕಾತಿಗಳನ್ನು ಪ್ರಕಟಿಸುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅಜಿತ್ ದೋವಲ್ ಯಾರು? : ಭಾರತದ ಸೆಪ್ಟೆಂಬರ್ 2016 ರ ಸರ್ಜಿಕಲ್ ಸ್ಟ್ರೈಕ್ ಮತ್ತು ಫೆಬ್ರವರಿ 2019ರಲ್ಲಿ ಪಾಕಿಸ್ತಾನದ ಗಡಿಯುದ್ದಕ್ಕೂ ಬಾಲಾಕೋಟ್ ವೈಮಾನಿಕ ದಾಳಿಗಳನ್ನು ದೋವಲ್ ಮೇಲ್ವಿಚಾರಣೆಯಲ್ಲಿ ನಡೆಸಲಾಯಿತು. ಅವರು ಡೋಕ್ಲಾಮ್ ಸ್ಟ್ಯಾಂಡ್-ಆಫ್ ಅನ್ನು ಕೊನೆಗೊಳಿಸಲು ಸಹಾಯ ಮಾಡಿದರು ಮತ್ತು ಈಶಾನ್ಯದಲ್ಲಿ ದಂಗೆಯನ್ನು ನಿಭಾಯಿಸಲು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡರು.