ಸುಬ್ರಹ್ಮಣ್ಯದ ಅಜಿತೇಶ್‌ ಭೂಸೇನೆಯ ಲೆಫ್ಟಿನೆಂಟ್‌ ಅಧಿಕಾರಿ ಹುದ್ದೆಗೆ ಆಯ್ಕೆ |

December 30, 2022
8:07 PM

ಕುಕ್ಕೆ ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಅಧಿಕಾರಿ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ.

ಪ್ರಸ್ತುತ ಡೆಹ್ರಾಡೂನ್‌ನಲ್ಲಿರುವ ಫಾರೆಸ್ಟ್ ರಿಸರ್ಚ್ ಇನ್ಸ್‌ಸ್ಟಿಟ್ಯೂಟ್‌ನ ದ್ವಿತೀಯ ಎಂಎಸ್ಸಿ ವಿದ್ಯಾರ್ಥಿಯಾಗಿರುವ ಅಜಿತೇಶ್ ಇಂಡಿಯನ್ ಆರ್ಮಿಯ ಆಫೀಸರ್ ಟ್ರೈನಿಂಗ್ ಅಕಾಡೆಮಿ ಚೆನ್ನೈಯಲ್ಲಿ ಒಂದು ವರ್ಷ ಕಾಲ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಅವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಪೆರ್ಮುಖ ಶ್ರೀಕೃಷ್ಣ ಶರ್ಮ ಹಾಗೂ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ  ವಿದ್ಯಾರತ್ನ  ಇವರ ಪುತ್ರ. ಅಜಿತೇಶ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪೂರೈಸಿ ಫಾರೆಸ್ಟರಿಯಲ್ಲಿ ಬಿ.ಎಸ್ಸಿ ಪದವಿಯನ್ನು ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror