ಕುಕ್ಕೆ ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಅಧಿಕಾರಿ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಪ್ರಸ್ತುತ ಡೆಹ್ರಾಡೂನ್‌ನಲ್ಲಿರುವ ಫಾರೆಸ್ಟ್ ರಿಸರ್ಚ್ ಇನ್ಸ್‌ಸ್ಟಿಟ್ಯೂಟ್‌ನ ದ್ವಿತೀಯ ಎಂಎಸ್ಸಿ ವಿದ್ಯಾರ್ಥಿಯಾಗಿರುವ ಅಜಿತೇಶ್ ಇಂಡಿಯನ್ ಆರ್ಮಿಯ ಆಫೀಸರ್ ಟ್ರೈನಿಂಗ್ ಅಕಾಡೆಮಿ ಚೆನ್ನೈಯಲ್ಲಿ ಒಂದು ವರ್ಷ ಕಾಲ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಅವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಪೆರ್ಮುಖ ಶ್ರೀಕೃಷ್ಣ ಶರ್ಮ ಹಾಗೂ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ವಿದ್ಯಾರತ್ನ ಇವರ ಪುತ್ರ. ಅಜಿತೇಶ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪೂರೈಸಿ ಫಾರೆಸ್ಟರಿಯಲ್ಲಿ ಬಿ.ಎಸ್ಸಿ ಪದವಿಯನ್ನು ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದಿದ್ದಾರೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …