Advertisement
ಸುದ್ದಿಗಳು

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

Share

ಸರ್ಕಾರಿ ಪ್ರೌಢಶಾಲೆ ಅಜ್ಜಾವರದ ಇಬ್ಬರು ವಿದ್ಯಾರ್ಥಿಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ INSPIRE Award ಯೋಜನೆಗೆ ಆಯ್ಕೆಯಾಗಿದ್ದಾರೆ.

ಈ ಯೋಜನೆಯಡಿ ಮಂಡೆಕೊಲು ಮನೆಯ ಜನಾರ್ಧನ ಹಾಗೂ ಧರ್ಮಾವತಿ ದಂಪತಿಯ ಪುತ್ರಿ, 9ನೇ ತರಗತಿಯ ಮೋಕ್ಷಿತಾ ಎಂ.ಜೆ ಮತ್ತು ಅಜ್ಜಾವರ ಗ್ರಾಮದ ನಾರಾಲು ಮನೆಯ ಪರಮೇಶ್ವರ ಹಾಗೂ ರಜನಿ ದಂಪತಿಯ ಪುತ್ರ, 9ನೇ ತರಗತಿಯ ಗುರುದೀಪ್ ಎನ್ ಅವರು ತಮ್ಮ ವೈಜ್ಞಾನಿಕ ಆಲೋಚನೆಗಳು ಮತ್ತು ನವೀನ ಆವಿಷ್ಕಾರ ಕಲ್ಪನೆಗಳನ್ನು ಪ್ರಸ್ತುತಪಡಿಸಲು ಆಯ್ಕೆಯಾಗಿದ್ದಾರೆ. ಗುರುದೀಪ್ ಎನ್ ಅವರು ವಾಟರ್ ಸ್ಪ್ರೇ ಮೆಷಿನ್ ಹಾಗೂ ಮೋಕ್ಷಿತಾ ಎಂ ಜೆ ಅವರು ಭೂಕಂಪ ಪತ್ತೆ ಹೆಚ್ಚುವ ಯಂತ್ರದ ಮಾದರಿಯನ್ನು ತಯಾರಿಸಿದ್ದರು.

ತಲಾ ₹10,000 ಪ್ರೋತ್ಸಾಹ ಧನ :  INSPIRE Award-MANAK ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಮ್ಮ ವೈಜ್ಞಾನಿಕ ಮಾದರಿಗಳನ್ನು ಅಭಿವೃದ್ಧಿಪಡಿಸಲು ತಲಾ ₹10,000 ನಗದು ಬಹುಮಾನ ನೀಡಲಾಗುತ್ತದೆ. ಈ ಪ್ರೋತ್ಸಾಹಧನವು ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಂಶೋಧನಾ ಮನೋಭಾವವನ್ನು ಉತ್ತೇಜಿಸಲು ಸಹಕಾರಿಯಾಗಲಿದೆ.

ವಿಜ್ಞಾನ ಶಿಕ್ಷಕ ಚಂದ್ರಶೇಖರ ಭಟ್ ಎ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಮಾದರಿಗಳ ಪ್ರಸ್ತಾವನೆಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಆಸಕ್ತಿ ಹೆಚ್ಚಳ :  ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ವಿಜ್ಞಾನ ಯೋಜನೆಗೆ ಆಯ್ಕೆಯಾಗಿರುವುದು ಶಾಲೆಗೆ ಹಾಗೂ ಸ್ಥಳೀಯ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ. ಇದು ಇತರ ವಿದ್ಯಾರ್ಥಿಗಳಿಗೂ ವಿಜ್ಞಾನ ಮತ್ತು ನವೀನತೆಯ ಕಡೆ ಆಸಕ್ತಿ ಮೂಡಿಸುವಲ್ಲಿ ಪ್ರೇರಣೆಯಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Two Class 9 students from Government High School, Ajjavara — Mokshitha M.J and Gurudeep N — have been selected for the prestigious INSPIRE Award-MANAK by the Department of Science and Technology, Government of India. They have received ₹10,000 each to develop and present their innovative science ideas.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

5 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago