Advertisement
MIRROR FOCUS

ಪ್ರತಿಷ್ಠಿತ ‘ಕಲ್ಲೇಗ ಟೈಗರ್ಸ್‌’ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ | ಕ್ಷುಲ್ಲಕ ಕಾರಣಕ್ಕೆ ಹಾರಿಹೋಯ್ತ ಮನೆ ಮಗನ ಪ್ರಾಣ |

Share

ಕೆಲವೊಂದು ಸಾವಿಗೆ ಕಾರಣಗಳು.. ಕಾರಣಗಳೇ ಅಲ್ಲ. ಆದರೆ ಬದುಕಿ ಬಾಳಬೇಕಿದ್ದ, ಹೆತ್ತವರ ಪಾಲಿಗೆ ಆಸರೆಯಾಗಬೇಕಿದ್ದ ಯುವ ತರುಣರ ಬದುಕು ಸಣ್ಣ ವಿಚಾರಗಳಿಗೆ ಕೊಲೆಯಲ್ಲಿ ಅಂತ್ಯವಾಗುತ್ತಿದೆ ಅನ್ನೋದೆ ಬೇಸರದ ಸಂಗತಿ. ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ (Tiger Dance Team) ಒಂದಾದ ಪುತ್ತೂರಿನ ಕಲ್ಲೇಗ ಟೈಗರ್ಸ್ (Kallega Tigers) ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ (Murder Case) ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.

ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು, ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ ಆಗಮಿಸಿದ ತಂಡಯೊಂದು ಯದ್ವಾತದ್ವ ತಲವಾರ್‌ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಪುತ್ತೂರಿನ ಕಲ್ಲೇಗ ಟೈಲರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗನನ್ನು ಮಚ್ಚಿನಿಂದ ಕಡಿದು ಹತ್ಯೆ ಮಾಡಿದ ಬೆನ್ನಲ್ಲೇ ಆರೋಪಿಗಳಾದ ಬನ್ನೂರು ನಿವಾಸಿ ಮನೀಷ್ ಮತ್ತು ಚೇತು ಪೊಲೀಸ್ ಠಾಣೆಗೆ ಶರಣಾಗಿದ್ದು, ಮತ್ತೋರ್ವ ಆರೋಪಿ ತಲೆಮಲೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಕೊಲೆಗೆ ಕಾರಣವೇನು?: ಮೂಲಗಳ ಪ್ರಕಾರ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಗಲಾಟೆ ಆರಂಭವಾಗಿದ್ದು, ಈ  ಎರಡು ಸಾವಿರ ರೂಪಾಯಿ ನೀಡುವ ವಿಚಾರದಲ್ಲಿ ಮಾತುಕತೆ ವಿಕೋಪಕ್ಕೆ ಹೋಗಿದೆ. ಮಾತುಕತೆ ವಿಕೋಪಕ್ಕೆ ಹೋಗುತ್ತಿದ್ದಂತೆ ಖಾಸಗಿ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗನಿಗೆ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ಉಂಟಾಗಿದ್ದು, ಕೊನೆಗೆ ಅಕ್ಷಯ್ ಕಲ್ಲೇಗನನ್ನು ಮೂರಕ್ಕೂ ಅಧಿಕ ಮಂದಿಯ ತಂಡ ಅಟ್ಟಾಡಿಸಿ ಹೋಗಿ ತಲವಾರಿನಿಂದ ದಾಳಿ ನಡೆಸಿದೆ.

ಇನ್ನು, ಅಕ್ಷಯ್ ಕಲ್ಲೇಗನ ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆಯೂ ಪೊಲೀಸರ ತನಿಖೆ ನಡೆಸುತ್ತಿದ್ದಾರೆ. ಅಕ್ಷಯ್‌ನ ಮೃತದೇಹ ಪೆಟ್ರೋಲ್ ಪಂಪ್‌ ಬಳಿಯ ಪೊದೆಯೊಂದರಲ್ಲಿ ರಕ್ತಸಿಕ್ತವಾಗಿ ಪತ್ತೆಯಾಗಿತ್ತು. ಇತ್ತ ತನ್ನ ಮಗ ಹತ್ಯೆಯಾದ ಸುದ್ದಿ ತಿಳಿಯುತ್ತಿದ್ದಂತೆ ಮೃತನ ತಂದೆ ದಿಕ್ಕೇ ತೋಚದೆ ಅಕ್ಷಯ್ ಅಕ್ಷಯ್ ಎಂದು ಒಂದೇ ಉಸಿರಿನಲ್ಲಿ ಅಳುತ್ತಿರುವುದು ಕಂಡು ನೆರೆದವರ ಹೃದಯ ಮಿಡಿದಿತ್ತು.

ಹುಲಿ ಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವ ವಹಿಸಿಕೊಂಡಿದ್ದ ಅಕ್ಷಯ್ ಭಾರೀ ಹೆಸರು ಮಾಡಿದ್ದ. ಕಳೆದ ವರ್ಷದ ಬಿಗ್‌ಬಾಸ್‌ ಶೋನಲ್ಲಿ ರೂಪೇಶ್ ಶೆಟ್ಟಿ ಮನವಿ ಮೇರೆಗೆ ಕಲ್ಲೇಗ ಟೈಗರ್ಸ್ ತಂಡವನ್ನು ಕರೆಸಿಕೊಂಡು ಪಿಲಿಯೇಸ ನೃತ್ಯವನ್ನು ಮಾಡಲಾಗಿತ್ತು. ಪಿಲಿವೇಷದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವ ವಹಿಸಿಕೊಂಡಿದ್ದ ಅಕ್ಷಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

An alarming incident took place last night in which the main leader of the Kallega Tigers team of Puttur, one of the prestigious tiger teams of Dakshina Kannada district, was hacked to death by thugs. Akshay Kallega (26), the head of the Kallega Tigers team, was hacked to death at the Nehru Nagar Junction of the Mani Mysore National Highway in Puttur Taluk of Dakshina Kannada District. When Akshay Kallega was in Puttur, a gang attacked and killed him in Yadwatdwa Talwar.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

19 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

21 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

21 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago