ಮಂಗಳೂರು ಇಲ್ಲಿನ ಗೃಹರಕ್ಷಕ ದಳಕ್ಕೆ ಗೃಹರಕ್ಷಕರನ್ನು ಭರ್ತಿ ಮಾಡಲು ಅರ್ಹರಿಂದ ಇದೇ ಅ.31ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಹಾಗೂ 19 ರಿಂದ 45 ವರ್ಷದೊಳಗಿನ ಕಂಪ್ಯೂಟರ್ ಜ್ಞಾನ ಹಾಗೂ ವಾಹನ ಚಾಲನೆ ತಿಳಿದಿರುವ ಪುರುಷ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ಇದೆ. ಆಸಕ್ತರು ನಗರದ ಮೇರಿಹಿಲ್ ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅದೇ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಕಚೇರಿ ದೂ.ಸಂಖ್ಯೆ:0824-2220562ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ. ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel