ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ | ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ |

February 28, 2023
1:05 PM

7 ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ ಅಂದ್ರೆ ಮಾರ್ಚ್​ 1 ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಇಂದು ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಬಜೆಟ್​ನಲ್ಲಿ 7ನೇ ವೇತನ ಆಯೋಗ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಾಳೆಯಿಂದ(ಮಾ.01) ಸಾಮೂಹಿಕವಾಗಿ ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ ಆಗುತ್ತವೆ.

ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ. ಯಾವುದೇ ಸಂಧಾನಕ್ಕೆ ನಾವು ಬಗ್ಗುವುದಿಲ್ಲ. 7ನೇ ವೇತನ ಆಯೋಗ ವರದಿ ಜಾರಿಯಾದ್ರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಳೆದ 1 ವರ್ಷದ ಸಿಎಂ ವೇತನ ಪರಿಷ್ಕರಣೆ ಭರವಸೆ ನೀಡಿದ್ದರು. ಆದರೆ ಈ ತನಕ ಸಿಎಂ ಭರವಸೆ ಈಡೇರಿಲ್ಲ. ವೇತನ‌ ಆಯೋಗ ಪರಿಶೀಲನೆ ಭರವಸೆ ನೀಡಿದೆ. ಆದರೆ ಎಲ್ಲವೂ ಚರ್ಚೆ ಹಂತದಲ್ಲಿ ಇದೆ. ನಾವು ಸರ್ಕಾರಕ್ಕೆ ಪ್ರತಿಭಟನೆ ಬಗ್ಗೆ ಗಮನಕ್ಕೆ ತಂದಿದ್ದೇವೆ. ಆದರೂ ಸರ್ಕಾರ ನಮ್ಮ ಬೇಡಿಕೆ ಬಗ್ಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ನಾಳೆಯಿಂದ ರಾಜ್ಯದ ಎಲ್ಲ ಸರ್ಕಾರಿ ನೌಕರರು ಒಗಟ್ಟಾಗಿ ಅನಿರ್ಧಿಷ್ಟ ಅವಧಿ ಹೋರಾಟ ಮಾಡಬೇಕು. ಎಲ್ಲ ವೃಂದ ಸಂಘಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಸಾಮೂಹಿಕ ನಾಯಕತ್ವದಲ್ಲಿ ಇದನ್ನು ಮಾಡುತ್ತಿದ್ದೇವೆ. 2022 ರಲ್ಲಿ ವೇತನ ಆಯೋಗ ರಚನೆ ಮಾಡ್ತೀವಿ ಅಂತ  ಹೇಳಿ, 9 ತಿಂಗಳ ಬಳಿಕ ಆಯೋಗ ರಚನೆಯಾಗಿದೆ. ಆದ್ರೆ ಮಧ್ಯಂತರ ವರದಿ ತೆಗೆದುಕೊಂಡು ನಮಗೆ ವೇತನ ಇಂಪ್ಲಿಮೆಂಟ್ ಮಾಡಿ ಅಂತ ವಿನಂತಿ ಮಾಡಿದ್ವಿ. ಆಗಲೂ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ರು. ಆಗಲಿನಿಂದಲೂ ಬರೀ ಚರ್ಚೆಯಲ್ಲಿದೆ. ಬದಲಿಗೆ ಏನು ನಿರ್ಣಯಕ್ಕೆ ಬಂದಿಲ್ಲ. ಇಡೀ ದೇಶದಲ್ಲಿ ಕಡಿಮೆ ಕನಿಷ್ಟ ವೇತನ ಪಡೆಯುವವರು ಕರ್ನಾಟಕ ರಾಜ್ಯದವರು. ಬೇರೆ ರಾಜ್ಯಗಳಲ್ಲಿ ವೇತನ ಹೆಚ್ಚಾಗಿದೆ. ಇಂದು 39% ಹುದ್ದೆ ಖಾಲಿ ಇದೆ. ಇಷ್ಟೆಲ್ಲ ಕೆಲಸ ಮಾಡಿ ಅಭಿವೃದ್ಧಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಉಪಾಧ್ಯಕ್ಷ ರುದ್ರಪ್ಪ, ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಭಾಗಿಯಾಗಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror