ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಯಲ್ಲಿ ಹೇಳಿದ್ದಾರೆ. ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಕಾರಿಡಾರ್ ನಿರ್ಮಾಣ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದನ್ನು ತಡೆಯಲು ಮತ್ತು ಪ್ರಾಣಿಗಳು ನಾಡಿಗೆ ಬರದಂತೆ ತಡೆಯಲು ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗೆ ಆನೆ, ಚಿರತೆ, ಹುಲಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವುಗಳು ಆಹಾರ, ನೀರು ಹರಿಸಿ ನಾಡಿಗೆ ಬರುತ್ತಿವೆ. ಇದರಿಂದ ಸಂಘರ್ಷ ಎದುರಾಗುತ್ತಿದೆ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿ, ನಾಳೆ ಮಂಡನೆಯಾಗಲಿರುವ ಕೇಂದ್ರ ಮುಂಗಡಪತ್ರದಲ್ಲಿ ರಾಜ್ಯಕ್ಕೆ ಹಲವು ಯೋಜನೆಗಳನ್ನು ಮಂಡಿಸುವಂತೆ ಕೋರಲಾಗಿದೆ ಎಂದು ತಿಳಿಸಿದರು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…