ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

April 28, 2024
4:40 PM

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಮುಂದಿನ ವಾರದಲ್ಲಿ ರಾಜ್ಯಾದ್ಯಂತ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹೀಗಾಗಿ ಮುಂದಿನ ವಾರವಿಡೀ ರಣ ಬಿಸಿಲು ಕರುನಾಡನ್ನ ಕಾಡಲಿದೆ. ಭಾನುವಾರ ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಅದಾಗ್ಯೂ, ಈ ವಾರದಲ್ಲಿ ಎಲ್ಲೂ ಮಳೆಯಾಗುವ ಮುನ್ಸೂಚನೆಯೂ ಇಲ್ಲದಾಗಿದೆ. ಆದರೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಎಪ್ರಿಲ್‌ ತಿಂಗಳ ಮಧ್ಯಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಆದರೆ, ಎಪ್ರಿಲ್‌ ತಿಂಗಳ ಅಂತ್ಯದ ವೇಳೆಗೆ ಮಳೆಯ ಹೊರತಾಗಿ ಬಿಸಿಲಿನ ತಾಪಮಾನ ಅಧಿಕವಾಗತೊಡಗಿದೆ. ಜನಸಾಮಾನ್ಯರು ಹಗಲಿನ ಹೊತ್ತು ಹೊರ ಬರಲು ಕಷ್ಟಪಡುವಂತಾಗಿದೆ. ಮೇ.6 ರ ನಂತರ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.

ಮುಂದಿನ ವಾರದಲ್ಲಿ ಬೆಂಗಳೂರಿನಲ್ಲಿಯೂ 38 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದೆ. ಈಗಾಗಲೇ ಬೆಂಗಳೂರು ಮಹಾನಗರ 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗುತ್ತಿದೆ. ಒಟ್ಟಿನಲ್ಲಿ ರಾಜ್ಯದ್ಯಂತ ಒಣಹವೆ ಮುಂದುವರೆಯಲಿದ್ದು, ಮಳೆಯ ಮುನ್ಸೂಚನೆಯೂ ಕೈಗೊಡುತ್ತಿದ್ದು ಸಾಧ್ಯವಾದಷ್ಟರ ಮಟ್ಟಿಗೆ ಬಿಸಿಲಿನ ತಾಪಮಾನದಿಂದ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror