ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಮುಂದಿನ ವಾರದಲ್ಲಿ ರಾಜ್ಯಾದ್ಯಂತ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೀಗಾಗಿ ಮುಂದಿನ ವಾರವಿಡೀ ರಣ ಬಿಸಿಲು ಕರುನಾಡನ್ನ ಕಾಡಲಿದೆ. ಭಾನುವಾರ ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಅದಾಗ್ಯೂ, ಈ ವಾರದಲ್ಲಿ ಎಲ್ಲೂ ಮಳೆಯಾಗುವ ಮುನ್ಸೂಚನೆಯೂ ಇಲ್ಲದಾಗಿದೆ. ಆದರೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಎಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಆದರೆ, ಎಪ್ರಿಲ್ ತಿಂಗಳ ಅಂತ್ಯದ ವೇಳೆಗೆ ಮಳೆಯ ಹೊರತಾಗಿ ಬಿಸಿಲಿನ ತಾಪಮಾನ ಅಧಿಕವಾಗತೊಡಗಿದೆ. ಜನಸಾಮಾನ್ಯರು ಹಗಲಿನ ಹೊತ್ತು ಹೊರ ಬರಲು ಕಷ್ಟಪಡುವಂತಾಗಿದೆ. ಮೇ.6 ರ ನಂತರ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.
ಮುಂದಿನ ವಾರದಲ್ಲಿ ಬೆಂಗಳೂರಿನಲ್ಲಿಯೂ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಈಗಾಗಲೇ ಬೆಂಗಳೂರು ಮಹಾನಗರ 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗುತ್ತಿದೆ. ಒಟ್ಟಿನಲ್ಲಿ ರಾಜ್ಯದ್ಯಂತ ಒಣಹವೆ ಮುಂದುವರೆಯಲಿದ್ದು, ಮಳೆಯ ಮುನ್ಸೂಚನೆಯೂ ಕೈಗೊಡುತ್ತಿದ್ದು ಸಾಧ್ಯವಾದಷ್ಟರ ಮಟ್ಟಿಗೆ ಬಿಸಿಲಿನ ತಾಪಮಾನದಿಂದ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…