ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |

August 1, 2024
2:07 PM

ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ‌ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನಲ್ಲಿ ಬುಧವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದೆ. ಪರಿಣಾಮ ಫಲ್ಗುಣಿ, ನೇತ್ರಾವತಿ, ಕುಮಾರಧಾರ ನದಿಗಳ ನೀರಿ ಮಟ್ಟ ಏರಿಕೆಯಾಗಿದೆ.

Advertisement
Advertisement
ಬೆಳ್ತಂಗಡಿ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಸೊಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತವಾಗಿದೆ. ಇದರಿಂದ ಈ ಭಾಗದಲ್ಲಿ ಸಂಪರ್ಕ ಕಡಿತಗೊಂಡಿದೆ.ವೇಣೂರಿನಲ್ಲಿ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡ ಪರಿಣಾಮ ವೇಣೂರಿನ ಚರ್ಚ್ ಬಳಿ ನೆರೆ ನೀರಲ್ಲಿ ಹಲವು ಬಸ್​ಗಳು ಸಿಲುಕಿದ ಘಟನೆ ನಡೆದಿದೆ. ರಾತ್ರಿ 1.30ಕ್ಕೆ ವೇಣೂರು ಪೊಲೀಸರು ಕಾರ್ಯಾಚರಣೆ ನಡೆಸಿದರು. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮ ದೆರಾಜೆಬೆಟ್ಟ ರಸ್ತೆಯಲ್ಲಿ ನೆರೆ ನೀರು ಕಾಣಿಸಿಕೊಂಡ ಪರಿಣಾಮ ಸಂಪರ್ಕ ಅಸ್ತವ್ಯಸ್ತವಾಗಿದೆ.

ಮಂಗಳೂರು ತಾಲೂಕಿನ ಅಮ್ಮುಂಜೆಯಲ್ಲಿ ನೆರೆ ಕಾಣಿಸಿಕೊಂಡಿದ್ದು, ಅಮ್ಮುಂಜೆ ದೇವಸ್ಥಾನಕ್ಕೂ ನೆರೆ ನೀರು ಪ್ರವೇಶಿಸಿದೆ. ದೇವಸ್ಥಾನ ಜಲ ದಿಗ್ಬಂಧನಕ್ಕೊಳಗಾಗಿದೆ. ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆ ಸುರಿಯುತ್ತಿರುವುದರಿಂದ ಫಲ್ಗುಣಿ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಮಂಗಳೂರು ಹೊರವಲಯದ ಗುರುಪುರ ಭಾಗದಲ್ಲಿ ನೆರೆ ಕಾಣಿಸಿಕೊಂಡಿದೆ.

ಮೂಡಬಿದಿರೆಯ ಶಿರ್ತಾಡಿಯಲ್ಲಿ 269 ಮಿಲಿ ಮೀಟರ್​, ಬೆಳ್ತಂಗಡಿ ತಾಲೂಕಿನ ಮರೋಡಿಯಲ್ಲಿ 264 ಎಂಎಂ, ಬೆಳ್ತಂಗಡಿಯ ಬಳಂಜ 250 ಎಂಎಂ, ಬೆಳ್ತಂಗಡಿಯ ಮಲೆಂತಬೆಟ್ಟುವಿನಲ್ಲಿ 205 ಎಂಎಂ, ಮಂಗಳೂರಿನ ಬೆಳುವಾಯಿಯಲ್ಲಿ 202 ಎಂ.ಎಂ, ಬೆಳ್ತಂಗಡಿ ಲಾಯಿಲಾದಲ್ಲಿ 195.5 ಎಂ.ಎಂ ಮಳೆ ಸುರಿದಿದೆ.

Advertisement

ಭರ್ತಿಯಾದ ರಾಜ್ಯದ ಜಲಾಶಯಗಳು: ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ರಾಜ್ಯದ ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿವೆ. ಹೆಚ್ಚುವರಿ ನೀರನ್ನು ಹೊರಕ್ಕೆ ಬಿಡುತ್ತಿರುವುದರಿಂದ ಹಲವಡೆ ಪ್ರವಾಹ ಪರಿಸ್ಥಿತಿ ಕೂಡ ಉಂಟಾಗಿದೆ. ರಾಜ್ಯದ ಯಾವ ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರಿದೆ, ಯಾವ ಯಾವ ಜಲಾಶಯದಿಂದ ಎಷ್ಟು ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

ರಾಜ್ಯದಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಜೀವನಾಡಿ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಅವಾಂತರ ಕೂಡ ಮಾಡಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ  ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲಾದ್ಯಂತ ಕೂಡ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕರಾವಳಿಯ ಎಲ್ಲ ಹಾಗೂ ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |
September 19, 2024
10:42 PM
by: ದ ರೂರಲ್ ಮಿರರ್.ಕಾಂ
ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |
September 19, 2024
9:17 PM
by: ದ ರೂರಲ್ ಮಿರರ್.ಕಾಂ
ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ
September 19, 2024
9:00 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |
September 19, 2024
8:53 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror