ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನಲ್ಲಿ ಬುಧವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದೆ. ಪರಿಣಾಮ ಫಲ್ಗುಣಿ, ನೇತ್ರಾವತಿ, ಕುಮಾರಧಾರ ನದಿಗಳ ನೀರಿ ಮಟ್ಟ ಏರಿಕೆಯಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಸೊಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತವಾಗಿದೆ. ಇದರಿಂದ ಈ ಭಾಗದಲ್ಲಿ ಸಂಪರ್ಕ ಕಡಿತಗೊಂಡಿದೆ.ವೇಣೂರಿನಲ್ಲಿ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡ ಪರಿಣಾಮ ವೇಣೂರಿನ ಚರ್ಚ್ ಬಳಿ ನೆರೆ ನೀರಲ್ಲಿ ಹಲವು ಬಸ್ಗಳು ಸಿಲುಕಿದ ಘಟನೆ ನಡೆದಿದೆ. ರಾತ್ರಿ 1.30ಕ್ಕೆ ವೇಣೂರು ಪೊಲೀಸರು ಕಾರ್ಯಾಚರಣೆ ನಡೆಸಿದರು. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮ ದೆರಾಜೆಬೆಟ್ಟ ರಸ್ತೆಯಲ್ಲಿ ನೆರೆ ನೀರು ಕಾಣಿಸಿಕೊಂಡ ಪರಿಣಾಮ ಸಂಪರ್ಕ ಅಸ್ತವ್ಯಸ್ತವಾಗಿದೆ. ಮಂಗಳೂರು ತಾಲೂಕಿನ ಅಮ್ಮುಂಜೆಯಲ್ಲಿ ನೆರೆ ಕಾಣಿಸಿಕೊಂಡಿದ್ದು, ಅಮ್ಮುಂಜೆ ದೇವಸ್ಥಾನಕ್ಕೂ ನೆರೆ ನೀರು ಪ್ರವೇಶಿಸಿದೆ. ದೇವಸ್ಥಾನ ಜಲ ದಿಗ್ಬಂಧನಕ್ಕೊಳಗಾಗಿದೆ. ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆ ಸುರಿಯುತ್ತಿರುವುದರಿಂದ ಫಲ್ಗುಣಿ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಮಂಗಳೂರು ಹೊರವಲಯದ ಗುರುಪುರ ಭಾಗದಲ್ಲಿ ನೆರೆ ಕಾಣಿಸಿಕೊಂಡಿದೆ.
ಮೂಡಬಿದಿರೆಯ ಶಿರ್ತಾಡಿಯಲ್ಲಿ 269 ಮಿಲಿ ಮೀಟರ್, ಬೆಳ್ತಂಗಡಿ ತಾಲೂಕಿನ ಮರೋಡಿಯಲ್ಲಿ 264 ಎಂಎಂ, ಬೆಳ್ತಂಗಡಿಯ ಬಳಂಜ 250 ಎಂಎಂ, ಬೆಳ್ತಂಗಡಿಯ ಮಲೆಂತಬೆಟ್ಟುವಿನಲ್ಲಿ 205 ಎಂಎಂ, ಮಂಗಳೂರಿನ ಬೆಳುವಾಯಿಯಲ್ಲಿ 202 ಎಂ.ಎಂ, ಬೆಳ್ತಂಗಡಿ ಲಾಯಿಲಾದಲ್ಲಿ 195.5 ಎಂ.ಎಂ ಮಳೆ ಸುರಿದಿದೆ.
ಭರ್ತಿಯಾದ ರಾಜ್ಯದ ಜಲಾಶಯಗಳು: ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ರಾಜ್ಯದ ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿವೆ. ಹೆಚ್ಚುವರಿ ನೀರನ್ನು ಹೊರಕ್ಕೆ ಬಿಡುತ್ತಿರುವುದರಿಂದ ಹಲವಡೆ ಪ್ರವಾಹ ಪರಿಸ್ಥಿತಿ ಕೂಡ ಉಂಟಾಗಿದೆ. ರಾಜ್ಯದ ಯಾವ ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರಿದೆ, ಯಾವ ಯಾವ ಜಲಾಶಯದಿಂದ ಎಷ್ಟು ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.
ರಾಜ್ಯದಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಜೀವನಾಡಿ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಅವಾಂತರ ಕೂಡ ಮಾಡಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲಾದ್ಯಂತ ಕೂಡ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕರಾವಳಿಯ ಎಲ್ಲ ಹಾಗೂ ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…