ಡಿ.20 | ಅಡಿಕೆ ಪರ್ಯಾಯ ಬಳಕೆ ಕಾರ್ಯಾಗಾರ

December 19, 2022
8:26 PM

ಅಡಿಕೆ ಪರ್ಯಾಯ ಬಳಕೆಯ ಬಗ್ಗೆ ಡಿ.20 ರಂದು ಪುತ್ತೂರಿನ ತೆಂಕಿಲದಲ್ಲಿ ಕಾರ್ಯಾಗಾರ ನಡೆಯಲಿದೆ. ಅಡಿಕೆಯ ಬಣ್ಣದಿಂದ ಬಟ್ಟೆ ತಯಾರಿ ಸೇರಿದಂತೆ ಅಡಿಕೆಯ ಔಷಧೀಯ ಉತ್ಪನ್ನಗಳು ಮತ್ತು ಇತರ ಬಳಕೆಯ ಬಗ್ಗೆ ವಿವಿಧ ಪರಿಣಿತರು ಮಾಹಿತಿ ನೀಡುವರು. 

 

ಶ್ರೀ ಸರಸ್ವತಿ ಚಾರಿಟೇಬಲ್‌ ಟ್ರಸ್ಟ್‌ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಮತ್ತು ಅಡಿಕೆ ಪತ್ರಿಕೆ ಸಹಯೋಗದಲ್ಲಿ  ನಡೆಯುವ ಕಾರ್ಯಕ್ರಮವನ್ನು ಕೃಷಿಕ, ಸಂಶೋಧಕ ಬದನಾಜೆ ಶಂಕರ ಭಟ್‌ ಉದ್ಘಾಟಿಸುವರು.

ಶ್ರೀ ಸರಸ್ವತಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಎಸ್‌ ಆರ್‌ ಸತೀಶ್ಚಂದ್ರ, ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ,  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ, ಫಾರ್ಮರ್‌ ಫಸ್ಟ್‌ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಶಾಸ್ತ್ರಿ ಪಡಾರು, ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ದೇಸೀ ಸಂಸ್ಥೆಯ ರುದ್ರಪ್ಪ, ಜೆಡ್ಡು ಗಣಪತಿ ಭಟ್‌, ಶಿವಮೊಗ್ಗದ ಅರುಣ್‌ ದೀಕ್ಷಿತ್‌, ಉಡುಪಿ ಎಸ್‌ ಡಿಎಂ ಆಯುರ್ವೇದ ಕಾಲೇಜಿನ ಡಾ.ಮುರಳೀಧರ ಬಲ್ಲಾಳ್‌, ಕುಮಾರಿ ಗಗನ, ಡಾ.ಅಪ್ಪಯ್ಯ, ವಿವೇಕ್‌ ಆಳ್ವ‌, ರವಿರಾಜ್‌, ಮುರಳೀಧರ ಮೊದಲಾದವರು ಭಾಗವಹಿಸುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror