ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ಜನರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಾರದು | ಕೇರಳ ಹೈಕೋರ್ಟ್‌ ಅಭಿಪ್ರಾಯ |

July 2, 2024
11:18 PM
ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ನಿರ್ವಹಿಸುವ ರಸ್ತೆಗಳಲ್ಲಿ ಪ್ರಮುಖ ಕೆಲಸವನ್ನು ಪ್ರಾರಂಭಿಸಿದ ಆರಂಭದಲ್ಲಿ ಮುಂದಾಗುವ ಸಮಸ್ಯೆಗಳ ಬಗ್ಗೆ ಜನರಿಗೆ ಅರಿವಿಗೆ ಬರುವುದಿಲ್ಲ. ಜನರು ತಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದ ನಂತರವೇ ಅದರ ಬಗ್ಗೆ ತಿಳಿದುಕೊಳ್ಳುತ್ತಾರೆ. ಇದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಪಾದಚಾರಿಗಳು ಮತ್ತು ವಾಹನ ಚಾಲಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.

ರಸ್ತೆಗಳ ನಿರ್ವಹಣೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯೊಂದರ ಸಂದರ್ಭಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ ರಿಟ್ ಅರ್ಜಿಯ ವಿಚಾರಣೆ ನಡೆಸುತ್ತಿರುವಾಗ ನ್ಯಾಯಾಲಯವು ಈ ಬಗ್ಗೆ ಪ್ರಶ್ನಿಸಿದೆ.

ದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಅನಿವಾರ್ಯವಾಗಿದೆ, ಆದರೆ ಇದು ಜನರಿಗೆ ಸಮಸ್ಯೆಯೇ ಆಗಬಾರದು. ಯಾವುದೇ ದೇಶದಲ್ಲಿ, ಒಂದು ಪ್ರಮುಖ ಯೋಜನೆ ಪ್ರಾರಂಭವಾಗುವ ಮೊದಲು, ಪರ್ಯಾಯಗಳನ್ನು ಯೋಚಿಸಲಾಗುತ್ತದೆ ಹಾಗೂ ಅದನ್ನು ಕಾರ್ಯಗತಗೊಳಿಸಲಾಗುತ್ತದೆ. ಹೀಗಾಗಿ ರಸ್ತೆ ಸುರಕ್ಷತೆಗೆ ಮೊದಲ ಆದ್ಯತೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror