ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ನಿರ್ವಹಿಸುವ ರಸ್ತೆಗಳಲ್ಲಿ ಪ್ರಮುಖ ಕೆಲಸವನ್ನು ಪ್ರಾರಂಭಿಸಿದ ಆರಂಭದಲ್ಲಿ ಮುಂದಾಗುವ ಸಮಸ್ಯೆಗಳ ಬಗ್ಗೆ ಜನರಿಗೆ ಅರಿವಿಗೆ ಬರುವುದಿಲ್ಲ. ಜನರು ತಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದ ನಂತರವೇ ಅದರ ಬಗ್ಗೆ ತಿಳಿದುಕೊಳ್ಳುತ್ತಾರೆ. ಇದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಪಾದಚಾರಿಗಳು ಮತ್ತು ವಾಹನ ಚಾಲಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.
ರಸ್ತೆಗಳ ನಿರ್ವಹಣೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯೊಂದರ ಸಂದರ್ಭಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ ರಿಟ್ ಅರ್ಜಿಯ ವಿಚಾರಣೆ ನಡೆಸುತ್ತಿರುವಾಗ ನ್ಯಾಯಾಲಯವು ಈ ಬಗ್ಗೆ ಪ್ರಶ್ನಿಸಿದೆ.
ದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಅನಿವಾರ್ಯವಾಗಿದೆ, ಆದರೆ ಇದು ಜನರಿಗೆ ಸಮಸ್ಯೆಯೇ ಆಗಬಾರದು. ಯಾವುದೇ ದೇಶದಲ್ಲಿ, ಒಂದು ಪ್ರಮುಖ ಯೋಜನೆ ಪ್ರಾರಂಭವಾಗುವ ಮೊದಲು, ಪರ್ಯಾಯಗಳನ್ನು ಯೋಚಿಸಲಾಗುತ್ತದೆ ಹಾಗೂ ಅದನ್ನು ಕಾರ್ಯಗತಗೊಳಿಸಲಾಗುತ್ತದೆ. ಹೀಗಾಗಿ ರಸ್ತೆ ಸುರಕ್ಷತೆಗೆ ಮೊದಲ ಆದ್ಯತೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…