ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.
ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
- ಅಂತರ್ಜಾಲ ಮಾಹಿತಿ

