Advertisement
MIRROR FOCUS

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ

Share

ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್  ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

Advertisement
Advertisement
ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ  ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಿದ್ದಾರೆ. ಪರಸ್ಪರ ಹೊಗಳಿಕೊಂಡ ನಾಯಕರೆಲ್ಲರ ಬಾಯಲ್ಲಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕೆಂಬ ಘೋಷಣೆ ಹೊರಹೊಮ್ಮಿತು. ಇದರ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‌
ಸಭೆಯಲ್ಲಿ ಮಾತನಾಡಿದ ದೇವೇ ಗೌಡ,  ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಕೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಸಿದ್ದರಾಮಯ್ಯ ನವರ ಗರ್ವ ಭಂಗ ಆಗಬೇಕು, ಪರಸ್ಪರ ಸಹಕಾರ, ಒಗ್ಗಟ್ಟಿಗೆ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ. ದೇಶದಲ್ಲಿ ಮೋದಿಯವರಂಥ  ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್‌ಡಿ ದೇವೇಗೌಡರು ಹೇಳಿದರು.

ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.

Advertisement

ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..

9 hours ago

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

ಕೃಷಿಯಲ್ಲಿ ಡ್ರೋನ್‌ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…

11 hours ago

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

11 hours ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

1 day ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

2 days ago