ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

June 18, 2025
3:37 PM

ಜಮ್ಮು – ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು ಯಾತ್ರೆಯ ಅವಧಿಯಲ್ಲಿ ಹಾರಾಟ ನಿಷೇಧ ವಲಯ ಎಂದು ಘೋಷಿಸಿದೆ.

Advertisement

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೊರಡಿಸಿರುವ ಆದೇಶದ ಪ್ರಕಾರ, ಪಹಲ್ಗಾಮ್ ಮತ್ತು ಬಾಲ್ಟಾಲ್  ಗೆ ಸಂಪರ್ಕ ಕಲ್ಪಿಸುವ ಮಾರ್ಗಗಳೂ ಸೇರಿದಂತೆ ಅಮರನಾಥ ಯಾತ್ರಾ ಮಾರ್ಗಗಳಲ್ಲಿ ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಡ್ರೋನ್‌ಗಳು ಮತ್ತು ಬಲೂನ್‌ಗಳು ಸೇರಿದಂತೆ ಯಾವುದೇ ರೀತಿಯ ವಾಯುಯಾನ ಸಾಧನಗಳ ಹಾರಾಟವನ್ನು ನಿಷೇಧಿಸಲಾಗಿದೆ. ಆದರೆ ಇದು ವೈದ್ಯಕೀಯ ಸ್ಥಳಾಂತರಿಸುವಿಕೆ, ವಿಪತ್ತು ನಿರ್ವಹಣೆ ಮತ್ತು ಭದ್ರತಾ ಪಡೆಗಳ ಕಣ್ಗಾವಲುಗಾಗಿ ಈ ನಿರ್ಬಂಧ ಅನ್ವಯಿಸುವುದಿಲ್ಲ.

ಮುಂಬರುವ ಅಮರನಾಥ ಯಾತ್ರೆಗೆ ಭದ್ರತಾ ಸಿದ್ಧತೆಗಳಿಗಾಗಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆಯ ನಡೆಯಿತು. ಅಮರನಾಥ ಯಾತ್ರೆಗೆ ಭದ್ರತೆ ಮತ್ತು ಸಿದ್ಧತೆಗಳ ಕುರಿತು ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸುವುದು ಇದರ ಉದ್ದೇಶವಾಗಿತ್ತು. ಹಿಮಾಲಯದಲ್ಲಿರುವ  3 ಸಾವಿರದ 888  ಮೀಟರ್ ಎತ್ತರದ ಪವಿತ್ರ ದೇವಾಲಯಕ್ಕೆ ವಾರ್ಷಿಕ ತೀರ್ಥಯಾತ್ರೆ ಮುಂದಿನ ತಿಂಗಳು 3 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 3 ರಂದು ನಡೆಯಲಿರುವ ರಕ್ಷಾ ಬಂಧನದ ಹಬ್ಬ ಆಚರಣೆಯೊಂದಿಗೆ ಮುಕ್ತಾಯಗೊಳ್ಳಲಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror