ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದರು. ಮೊದಲ ಗುಂಪಿನ 5 ಸಾವಿರದ 880 ಯಾತ್ರಿಗಳು ಪ್ರಯಾಣ ಬೆಳೆಸಲಿದ್ದಾರೆ. ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 7ರವರೆಗೆ, 38 ದಿನಗಳ ಕಾಲ ಅಮರನಾಥ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಕಥುವಾದ ಲಖನ್‌ಪುರದಿಂದ , ಪವಿತ್ರ ಗುಹೆಯವರೆಗೆ ಸುಮಾರು 1 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮತ್ತು ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಬೇಸ್ ಕ್ಯಾಂಪ್‌ನಲ್ಲಿ ಯಾತ್ರಿಕರಿಗೆ ಎಲ್ಲಾ ರೀತಿಯ ಮೂಲ ಸೌಕರ್ಯ ಒದಗಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel