12 ಕೋಟಿ ರೂ. ವೆಚ್ಚದಲ್ಲಿ ಅಂಬಿ ಸ್ಮಾರಕ ನಿರ್ಮಿಸಲು ಸಚಿವ ಸಂಪುಟ ನಿರ್ಧಾರ |

January 6, 2022
8:43 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರದ ಕಂಠೀರವ ಸ್ಟುಡೀಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್‌ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿದೆ.

ಗುರುವಾರದಂದು ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದರು.

ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದಲ್ಲದೇ ಎಲೆಕ್ಟ್ರಿಕ್ ಬಸ್‌ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್‌ಗೆ ಗರಿಷ್ಠ ಬೇಡಿಕೆ , ಪ್ರೋತ್ಸಾಹ ಧನ ನೀಡುತ್ತಿದ್ದು, ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror