ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರದ ಕಂಠೀರವ ಸ್ಟುಡೀಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್‌ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿದೆ.
ಗುರುವಾರದಂದು ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದರು.
ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದಲ್ಲದೇ ಎಲೆಕ್ಟ್ರಿಕ್ ಬಸ್‌ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್‌ಗೆ ಗರಿಷ್ಠ ಬೇಡಿಕೆ , ಪ್ರೋತ್ಸಾಹ ಧನ ನೀಡುತ್ತಿದ್ದು, ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…
ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ…
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3…
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…