ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವಣ ಯೋಗ ಶಿಕ್ಷಣದ ಕುರಿತಾದ ಒಪ್ಪಂದ ಮಾಡಿಕೊಳ್ಳಲಾಯಿತು. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ರವಿಶಂಕರ ಗುರೂಜಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.
ಕಳೆದ ಹದಿನಾಲ್ಕು ವರ್ಷಗಳಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೂಲಕ ಯೋಗಶಿಕ್ಷಣವನ್ನು ಒದಗಿಸಿಕೊಡಲಾಗುತ್ತಿದೆ. ಪ್ರತಿ ವರ್ಷವೂ ಶೈಕ್ಷಣಿಕ ಚಟುವಟಿಕೆಗಳ ಆರಂಭದ ದಿನಗಳಲ್ಲಿ ಮೂಲಭೂತ ಯೋಗ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡುವ ಕಾರ್ಯವನ್ನು ಅಂಬಿಕಾ ಸಂಸ್ಥೆಗಳು ಮಾಡಿಕೊಂಡು ಬರುತ್ತಿವೆ. ಇದಲ್ಲದೆ ಪ್ರತಿನಿತ್ಯ ತರಗತಿ ಆರಂಭಕ್ಕೂ ಮುನ್ನ ನಿಗದಿತ ಸಮಯದ ಯೋಗಾಭ್ಯಾಸವನ್ನು ನಡೆಸಲಾಗುತ್ತಿದೆ. ಪಠ್ಯಕ್ರಮದಲ್ಲಿ ಯೋಗವನ್ನು ಅಳವಡಿಸಿಕೊಂಡ ರಾಜ್ಯದ ಮೊದಲ ಸಂಸ್ಥೆಯಾಗಿ ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ದಾಖಲೆ ಬರೆದಿವೆ. ಇದೀಗ ಆರ್ಟ್ ಆಫ್ ಲಿವಿಂಗ್ ಹಾಗೂ ಅಂಬಿಕಾ ಸಂಸ್ಥೆಗಳ ನಡುವೆ ಅಧಿಕೃತ ಒಪ್ಪಂದ ನಡೆದಿದ್ದು, ಮುಂದಿನ ದಿನಗಳಲ್ಲಿ ಅಂಬಿಕಾ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಯೋಗಾಭ್ಯಾಸ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ.
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…