ಸುದ್ದಿಗಳು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕೋತ್ಸವ | ಶಿಕ್ಷಣದೊಂದಿಗೆ ಸಂಸ್ಕಾರ ದೊರೆತಾಗ ಉತ್ಕೃಷ್ಟ ವ್ಯಕ್ತಿತ್ವ ನಿರ್ಮಾಣ | ಆದರ್ಶ ಗೋಖಲೆ |

Share

ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಅಡಗಿರುವ ವಿಶೇಷ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ. ಶಾಲೆ ಕೇವಲ ಪಠ್ಯ ಶಿಕ್ಷಣಕ್ಕಷ್ಟೇ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ತೊಡಗಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ. ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಸಂಸ್ಕಾರವನ್ನೂ ಪಡೆದಾಗ ಉತ್ಕೃಷ್ಟ ವ್ಯಕ್ತಿತ್ವ ಪಡೆಯಲು ಸಾಧ್ಯವಾಗುತ್ತದೆ ಎಂದು ವಾಗ್ಮಿ, ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು.

Advertisement
ಅವರು ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನಗರದ ಬಪ್ಪಳಿಗೆಯಲ್ಲಿರುವ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ  ಹಮ್ಮಿಕೊಂಡಿದ್ದ ಪ್ರತಿಭಾ ತರಂಗಿಣೀ 2022-23 – ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ದೇಶಕ್ಕಾಗಿ ಅನೇಕ ಮಹಾನ್ ನಾಯಕರು ಸಣ್ಣ ವಯಸ್ಸಿನಲ್ಲೇ ತಮ್ಮ ಪ್ರಾಣವನ್ನು ಮುಡಿಪಾಗಿಟ್ಟರು. ನಮ್ಮ ದೇಶಕ್ಕೆ ಭವ್ಯ ಪರಂಪರೆಯಿದ್ದು, ದೇಶದ ಆದರ್ಶ ಉಳಿಸಿ ಬೆಳೆಸುವ ಯುವಕರನ್ನು ಸಮಾಜ ಅಪೇಕ್ಷಿಸುತ್ತಿದೆ. ಮುಂದಿನ ದಿನಗಳಲ್ಲಿ ಯುವಜನತೆ ಪ್ರಪಂಚದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆಯುವ ಮೂಲಕ ಭಾರತವನ್ನು ವಿಶ್ವ ಗುರುವನ್ನಾಗಿಸುವ ಭರವಸೆ ಇದೆ. ದೇಶ ಹಾಗೂ ಧರ್ಮದ ಮೇಲಿನ ಕಾಳಜಿಯನ್ನು ಜನತೆ ಮೆರೆಸುವ ಯೋಚನೆ ಮಾಡಬೇಕು. ಮುಖ್ಯವಾಗಿ ಮನೆಯ ಸಂಸ್ಕøತಿ, ಭಾಷೆ, ಸೊಗಡು, ಆಚರಣೆಗಳು, ಜಾನಪದ ಮೊದಲಾದವುಗಳನ್ನು ಮಕ್ಕಳಿಗೆ ತಿಳಿಸುವ ಕೆಲಸ ಮಾಡಿದಾಗ ಭಾರತದ ಸಂಸ್ಕøತಿ, ಪರಂಪರೆ ಮುಂದಿನ ಪೀಳಿಗೆಗೂ ತಿಳಿಯುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅಂಬಿಕಾ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕಲೆಗಳು ಭಾರತೀಯ ಮೌಲ್ಯಗಳಿಗೆ ಆಸರೆಯಾಗಿದ್ದು, ಮಕ್ಕಳಲ್ಲಿ ಅಡಗಿರುವ ವಿಶೇಷ ಪ್ರತಿಭೆಗಳು ಸೂಕ್ತ ವೇದಿಕೆಯಲ್ಲಿ ಪ್ರದರ್ಶನವಾಗಬೇಕು. ವಿದ್ಯಾರ್ಥಿಗಳು ಪೂರ್ಣ ಮನಸ್ಸಿನಿಂದ ಭಾರತೀಯ ಕಲಾ ಪ್ರಕಾರಗಳ ಕುರಿತು ಅರಿತಾಗ ಅವರ ಚಿಂತನೆಯೂ ಬದಲಾಗುತ್ತದೆ ಎಂದರು.
ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಶಾಲೆಯ ವಾರ್ಷಿಕ ವಿಶೇಷ ವರದಿಯ ವಿಡಿಯೋ ಪ್ರದರ್ಶನ ಮಾಡಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಅಂಬಿಕಾ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ನಿವೃತ್ತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್, ಸುರೇಶ್ ಶೆಟ್ಟಿ, ಪ್ರಸನ್ನ ಭಟ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸೀಮಾ ನಾಗರಾಜ್, ಅಂಬಿಕಾ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್, ವಿದ್ಯಾರ್ಥಿ ಪ್ರತಿನಿಧಿಗಳಾದ ಮನ್ವಿತ್ ಎಸ್., ಸಂಸ್ಕೃತಿ ವಿ ಶೆಟ್ಟಿ ಉಪಸ್ಥಿತರಿದ್ದರು.
ಪ್ರಾಂಶುಪಾಲೆ ಮಾಲತಿ ಡಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ಸುಜನಿ ಎಂ. ಬೋರ್ಕರ್ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

45 minutes ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

2 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

4 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

20 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

21 hours ago